ಪೊನ್ನಂಪೇಟೆ, ಮಾ. ೨೬: ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸತತವಾಗಿ ಕಳೆದ ಮೂರು ವರ್ಷಗಳಿಂದ ಆಯ್ಕೆಯಾಗುವ ಮೂಲಕ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಹ್ಯಾಟ್ರಿಕ್ ಸಾಧನೆ ಮಾಡಿದೆ.
ತಾ. ೨೪ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರ ವಾಸಿನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿಯನ್ನು ವಿತರಿಸಿದರು. ಈ ಸಂದರ್ಭ ಹಾಜರಿದ್ದ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಉಪಾಧ್ಯಕ್ಷೆ, ಬೊಟ್ಟಂಗಡ ದಶಮಿ ಸದಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಹಾಗೂ ಗ್ರಾ.ಪಂ. ಸದಸ್ಯರು, ಸಿಬ್ಬಂದಿ ಪ್ರಶಸ್ತಿ ಸ್ವೀಕರಿಸಿದರು.