ಗೋಣಿಕೊಪ್ಪಲು, ಮಾ. ೨೬: ರಾಜ್ಯದ ಬಿಜೆಪಿ ಸರ್ಕಾರ ಬಡವರ, ಶೋಷಿತರ ಪರವಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಸತತವಾಗಿ ವಿಫಲವಾಗಿವೆ ಎಂದು ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೈಕೋರ್ಟ್ ವಕೀಲ ಎ.ಎಸ್. ಪೊನ್ನಣ್ಣ ಆರೋಪ ಮಾಡಿದರು.

ನಗರದ ಕಿತ್ತಳೆ ಬೆಳೆಗಾರರ ಸಂಘದ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಅಸಂಘಟಿತ ಕಾರ್ಮಿಕ ಹಿತರಕ್ಷಣಾ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಇವರು, ರಾಜ್ಯದ ಬಿಜೆಪಿ ಸರಕಾರ ಕಾರ್ಮಿಕರು, ಶೋಷಿತರ, ಬಡವರ ಪರ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲವರ್ಗ, ಅಲ್ಪಸಂಖ್ಯಾತರ ಜೀವನದ ಜೊತೆಯಲ್ಲಿ ಚೆಲ್ಲಾಟವಾಡುತ್ತಿದೆ ಎಂದರು.

ಮೀಸಲಾತಿ ವಿಚಾರಕ್ಕೆ ಸಂಬAಧಿಸಿದAತೆ ಜಾತಿ, ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ. ಸಮಾಜದಲ್ಲಿ ಶ್ರೀಮಂತ -ಬಡವ ಎಂಬ ವರ್ಗವಿದ್ದು, ಬೇರೆ ಯಾವುದೇ ಜಾತಿ, ಧರ್ಮವಿಲ್ಲ, ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಇದನ್ನು ಸರಿದೂಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ, ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ತಾವೆಲ್ಲರು ಜೊತೆಯಾಗಿ ನಿಲ್ಲಬೇಕು ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ ಮಾತನಾಡಿ, ಬಡಜನರು ಉದ್ಯೋಗವಿಲ್ಲದೇ ಕಷ್ಟ ಅನುಭವಿಸುತ್ತಿದ್ದಾರೆ. ಬಡವರ ಬಗ್ಗೆ ಕಾಳಜಿ ವಹಿಸದ ಬಿಜೆಪಿ ಸರ್ಕಾರದಿಂದ ಯಾವುದೇ ರೀತಿಯ ಪ್ರಯೋಜನ ಬಡವರಿಗೆ ಲಭ್ಯವಾಗುತ್ತಿಲ್ಲ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಕ್ತಾರ ಟಾಟು ಮೊಣ್ಣಪ್ಪ, ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಸುನಿಲ್, ಬಬೀತ್, ಪೊನ್ನಂಪೇಟೆಯ ಮಂಜುಳಾ, ಕಾಂಗ್ರೆಸ್ ಪಕ್ಷದ ಓಬಿಸಿ ಜಿಲ್ಲಾಧÀ್ಯಕ್ಷ ಬಿ.ಎನ್. ಪೃಥ್ವಿ, ಅಧ್ಯಕ್ಷ ನವೀನ್, ಮತ್ತಿತರರು ಉಪಸ್ಥಿತರಿದ್ದರು.