ವೀರಾಜಪೇಟೆ, ಮಾ. ೨೭: ವೀರಾಜಪೇಟೆಯ ಆರ್ಜಿ ಗ್ರಾಮದಲ್ಲಿ ಜಲ ಜೀವನ್ ಯೋಜನೆಯಡಿ ನಿರ್ಮಿಸಲಾಗಿರುವ ಕುಡಿಯುವ ನೀರು ಸರಬರಾಜು ಟ್ಯಾಂಕ್‌ನ್ನು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ಈ ಸಂದರ್ಭ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ತ್ ಸದಸ್ಯ ಸುಜಾ ಕುಶಾಲಪ್ಪ, ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ, ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.