*ಗೋಣಿಕೊಪ್ಪ, ಮಾ. ೨೭: ದಲಿತರು ಶೋಷಣೆಯ ಬದುಕಿನಿಂದ ಹೊರಬರಲು ಹಲವಾರು ಯೋಜನೆಗಳ ಮೂಲಕ ಅನುಕೂಲತೆ ಯನ್ನು ದಲಿತರ ಮನೆಗಳಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ದಲಿತರ ಪರ ನಿಂತಿದೆ ಎಂದು ರಾಜ್ಯ ಎಸ್.ಸಿ. ಮೋರ್ಚಾದ ಕಾರ್ಯದರ್ಶಿ ಪರಾಮನಂದ ಅಭಿಪ್ರಾಯ ವ್ಯಕ್ತಪಡಿಸಿದರು.

ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆದ ಎಸ್.ಸಿ. ಸಮಾವೇಶದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ ಕನಸಿನ ಭಾರತ ನಿರ್ಮಾಣದ ಹೆಜ್ಜೆಯಲ್ಲಿ ಬಿಜೆಪಿ ಸರ್ಕಾರ ಸಾಗುತ್ತಿದೆ. ೬೫ ವರ್ಷಗಳ ಸುದೀರ್ಘ ಅವಧಿಯ ಆಡಳಿತ ನಡೆಸಿದ ಕಾಂಗ್ರೆಸ್ ದಲಿತರ ಮುಗ್ಧ ಮನಸುಗಳನ್ನು ದುರುಪಯೋಗಪಡಿಸಿಕೊಂಡು ಆ ಸಮುದಾಯದವರನ್ನು ಮುಖ್ಯ ವಾಹಿನಿಯತ್ತ ಕರೆತರುವಲ್ಲಿ ವಿಫಲತೆಯನ್ನು ಕಂಡಿದೆ. ದಲಿತರನ್ನು ಶಿಕ್ಷಣವಂತರಾಗಿ ದೇಶದ ಆಸ್ತಿಯಾಗಿ ಮಾಡಬೇಕಾದ ಕಾರ್ಯವನ್ನು ಮರೆತು ಮತಕ್ಕಾಗಿ ಬಳಸಿ ನೋಟು, ಬಾಟಲಿಗಳನ್ನು ಹಂಚುತ್ತಲೇ ಅವರ ಅಸ್ತಿತ್ವದ ಅಳಿವಿಗೆ ಕಾರಣರಾಗಿದ್ದಾರೆ. ಕಳೆದ ೯ ವರ್ಷಗಳ ಬಿಜೆಪಿ ಆಡಳಿತದಲ್ಲಿ ದಲಿತ ಸಮುದಾಯ ದವರು ಪ್ರಗತಿಯನ್ನು ಕಾಣಬೇಕೆಂಬ ಚಿಂತನೆಯಲ್ಲಿ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ದಲಿತರ ಪರವಾಗಿ ನಿಂತಿರುವ ಪಕ್ಷವನ್ನು ಬೆಂಬಲಿಸಬೇಕೆAದು ಕರೆ ನೀಡಿದರು.

ಪೌರ ಕಾರ್ಮಿಕರನ್ನು ಮನುಷ್ಯರಂತೆ ಕಾಣಬೇಕೆಂಬ ನಿಟ್ಟಿನಲ್ಲಿ ಹಲವಾರು ಕಾರ್ಯಯೋಜನೆಗಳನ್ನು ರೂಪಿಸಿ ೧೬ ಸಾವಿರ ಮಂದಿಯನ್ನು ಖಾಯಂ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಹೇಳಿದ ಅವರು ಕಾಂಗ್ರೆಸ್ ಆಡಳಿತದಲ್ಲಿ ಅಂಬೇಡ್ಕರ್ ಚಿಂತನೆಯನ್ನು ಜಾರಿಗೊಳಿಸದೆ ಮತ್ತು ಅವರ ಪುತ್ಥಳಿಗಳನ್ನು ಕೂಡ ನಿರ್ಮಿಸದೇ ನಿರ್ಲಕ್ಷ÷್ಯ ಹೊಂದಿದ್ದರು. ಬಿಜೆಪಿ ಸರ್ಕಾರ ೬ಕ್ಕೂ ಹೆಚ್ಚು ಅಂಬೇಡ್ಕರ್ ಪುತ್ಥಳಿಗಳನ್ನು ನಿರ್ಮಿಸಿ ಅವರಿಗೆ ಗೌರವ ಸಲ್ಲಿಸಿದೆ ಎಂದು ಹೇಳಿದರು.

ಬಿಜೆಪಿಗೆ ಬಹುಮತ ವಿಶ್ವಾಸ

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು ಕೊಡಗಿನ ಎರಡು ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಲಿದೆ. ಅಭಿವೃದ್ಧಿಯ ದೃಷ್ಟಿಯಿಂದ ಜನರು ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಭಿಮತ ವ್ಯಕ್ತಪಡಿಸಿದರು.

ವೀರಾಜಪೇಟೆ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್.ಸಿ. ಮೋರ್ಚಾದ ಸಮಾವೇಶ ವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದವರನ್ನು, ಪರಿಶಿಷ್ಟರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಬಿಜೆಪಿ ಸರ್ಕಾರದ ಮೂಲ ಉದ್ದೇಶವಾಗಿದೆ ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಯಲ್ಲಿದ್ದ

(ಮೊದಲ ಪುಟದಿಂದ) ಒಳ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಇದರಿಂದ ಹಲವು ಒಳ ಪಂಗಡಗಳಿಗೆ ಮೀಸಲಾತಿಯ ಅನುಕೂಲ ಲಭ್ಯವಾಗಲಿದೆ ಎಂದರು.

ಸರ್ಕಾರವು ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿದ್ದು ಪ್ರತಿ ವಿಧಾನ ಸಭಾಕ್ಷೇತ್ರಕ್ಕೆ ಅರ್ಹ ಫಲಾನುಭವಿಗೆ ೧೦೦ ಸ್ಕೂಟರ್‌ಗಳನ್ನು ಸರ್ಕಾರದ ವತಿಯಿಂದ ನೀಡಲು ಯೋಜನೆ ಜಾರಿಗೊಳಿಸಲಾಗಿದೆ. ಬಡ ಜನರು ಶಿಕ್ಷಣದಿಂದ ವಂಚಿತರಾಗದAತೆ ತಪ್ಪಿಸಲು ತಾಲೂಕು ಮಟ್ಟದಲ್ಲಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಇದರಿಂದ ಬಡ ಜನರ ಮಕ್ಕಳ ವಿದ್ಯಾಭ್ಯಾಸ ಮೊಟಕುಗೊಳ್ಳದಂತೆ ಎಚ್ಚರವಹಿಸಲಾಗುತ್ತಿದೆ.

ಮತದಾರರು ಆಮಿಷಗಳಿಂದ ದೂರವಿರಬೇಕು. ಕ್ಷೇತ್ರವಾರು ಹಾಡಿಗಳಲ್ಲಿ, ಕಾಲೋನಿಗಳಲ್ಲಿ ನಾಗರಿಕರ ಅನುಕೂಲಕ್ಕಾಗಿ ಕುಡಿಯುವ ನೀರು ಹಾಗೂ ಗುಣಮಟ್ಟದ ಕಾಂಕ್ರಿಟ್ ರಸ್ತೆ, ವಿದ್ಯುತ್ ಅನ್ನು ಪೂರೈಸಲಾಗಿದೆ. ಒಟ್ಟಾಗಿ ಶೋಷಿತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಬಿಜೆಪಿ ಸರ್ಕಾರ ಕೆಲಸ ನಿರ್ವಹಿಸುತ್ತಿದೆ ಎಂದರು.

ವೀರಾಜಪೇಟೆ ಮಂಡಲದ ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಶಶಿ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಕಳೆದ ಮೂರು ವರ್ಷಗಳ ಹಿಂದೆ ಕೊರೊನಾ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಜನರ ಜೀವವನ್ನು ಉಳಿಸುವ ಕೆಲಸದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಪ್ರತಿ ನಾಗರಿಕನಿಗೆ ಕೊರೊನಾ ವಾಕ್ಸಿನ್‌ಅನ್ನು ಉಚಿತವಾಗಿ ನೀಡಿದ ಕೀರ್ತಿ ಪ್ರಧಾನಿಯವರಿಗೆ ಸಲ್ಲಬೇಕು. ಯಾವುದೇ ಫಲಾನುಭವಿಗೆ ಸಿಗುವ ಸವಲತ್ತುಗಳನ್ನು ನೇರವಾಗಿ ಬ್ಯಾಂಕ್ ಖಾತೆ ಮೂಲಕ ಸಂದಾಯವಾಗಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಸರ್ಕಾರ ಹಾಗೂ ಶಾಸಕರು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಮತದಾರರು ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದರು.

ವೀರಾಜಪೇಟೆ ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ದಲಿತರನ್ನು ಕಾಂಗ್ರೆಸ್ ಪಕ್ಷ ಗುತ್ತಿಗೆ ಪಡೆದ ರೀತಿಯಲ್ಲಿ ಮಾತನಾಡುತ್ತಿದೆ. ಇವರ ಏಳಿಗೆಗೆ ಕಾಂಗ್ರೆಸ್‌ನಿAದ ಯಾವುದೇ ಕೊಡುಗೆ ನೀಡಿಲ್ಲ. ಕೇವಲ ದಲಿತರನ್ನು ವೋಟ್ ಬ್ಯಾಂಕ್‌ಗಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ ಹಿಂದುತ್ವ ಉಳಿದುಕೊಳ್ಳಲು ಮತ್ತು ಜಾತೀಯತೆಯ ಮೌಢ್ಯತೆಯನ್ನು ತೊಲಗಿಸಲು ಬಿಜೆಪಿಯ ಪಕ್ಷವನ್ನು ಬೆಂಬಲಿಸುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಮಹೇಶ್ ಕುಮಾರ್, ಎಸ್.ಸಿ. ಮೋರ್ಚಾದ ಜಿಲ್ಲಾ ಅಧ್ಯಕ್ಷ ಶಾಂತಳ್ಳಿ ಪ್ರತಾಪ್, ವೀರಾಜಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ತಾಲೂಕು ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಕಾರ್ಯದರ್ಶಿ ನವೀನ್, ಮಹೇಶ್, ಪಳನಿ ಪ್ರಕಾಶ್ ಇದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಹಾಗೂ ಹೆಚ್ಚಿನ ಅಂಕ ಪಡೆದು ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ರೇಖಾ ಶ್ರೀಧರ್ ತಂಡ ಪ್ರಾರ್ಥಿಸಿ ಎಸ್.ಸಿ. ಮೋರ್ಚಾದ ಕಾರ್ಯದರ್ಶಿ ಸುಶೀಲ ಸ್ವಾಗತಿಸಿ, ನಿರೂಪಿಸಿದರು. ಮುಂಜಾನೆ ಸ್ಥಳೀಯ ಕಾಲೇಜು ಆವರಣದಿಂದ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ಮುಖ್ಯ ಬೀದಿಯಲ್ಲಿ ಸಾಗಿ ಕೊಡವ ಸಮಾಜದಲ್ಲಿ ಸಮಾಗಮಗೊಂಡಿತ್ತು. ಸಮಾವೇಶದಲ್ಲಿ ಹಲವು ಮಂದಿ ವಿವಿಧ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಸಿ.ಕೆ. ಬೋಪಣ್ಣ, ಗುಮ್ಮಟ್ಟಿರ ಕಿಲನ್ ಗಣಪತಿ, ಚೆಕ್ಕೆರ ಸೂರ್ಯ, ಗಿರೀಶ್ ಗಣಪತಿ, ಮಾಚಿಮಾಡ ರವೀಂದ್ರ, ಕಾಟಿಮಾಡ ಶರೀನ್ ಮುತ್ತಣ್ಣ, ಮೂಕಳೇರ ಮಧು, ಚೆಪ್ಪುಡಿರ ಮಾಚು, ಮುದ್ದಿಯಡ ಮಂಜು ಸೇರಿದಂತೆ ಇನ್ನಿತರ ಗಣ್ಯರು ಹಾಜರಿದ್ದರು.

- ಜಗದೀಶ್, ದಿನೇಶ್