ನಾಪೋಕ್ಲು, ಮಾ. ೨೬: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಪಾಲೂರು ಗ್ರಾಮದ ಶ್ರೀ ಪಂಚಲಿAಗೇಶ್ವರ ದೇವಸ್ಥಾನಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಿ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಪಂಚಲಿAಗೇಶ್ವರ ದೇವಾಲಯದ ಆವರಣದಲ್ಲಿ ರೂ. ೫೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಾಲಯದ ತಡೆಗೋಡೆ ಕುಸಿದಿದ್ದು ಸಾರ್ವಜನಿಕ ರಿಂದ ತಡೆಗೋಡೆ ನಿರ್ಮಿಸಬೇಕೆಂದು ಮನವಿ ಬಂದ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆ ಮುಖಾಂತರ ರೂ. ೫೫ ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ ಎಂದರು.

ಬೆಟ್ಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಪಂಡ ರಾಲಿ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಮಗಾರಿಯ ಮಾಹಿತಿಯನ್ನು ನೀಡಿದರು. ಇದಕ್ಕೂ ಮುನ್ನ ಅರ್ವತ್ತೋಕ್ಲು ಗ್ರಾಮ ವ್ಯಾಪ್ತಿಯಲ್ಲಿ ರೂ. ೨.೧೫ ಕೋಟಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿ ಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಈ ಸಂದರ್ಭ ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎ. ರಾಮಣ್ಣ, ಕಾಫಿ ಮಂಡಳಿ ಮಾಜಿ ಅಧಿಕಾರಿ ಅಚ್ಚುಡ ಅನಂತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಬೈತಡ್ಕ ಡೆಲ್ವಿ ದೇವಯ್ಯ, ಪೊದವಾಡ ಮೀನಾಕ್ಷಿ, ಬೆಟ್ಟಗೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಡ್ಯದ ವಿಜಯಕುಮಾರ್, ಅರ್ಚಕರಾದ ದೇವಿ ಪ್ರಸಾದ್ ಮತ್ತು ಅರುಣ, ಪಾರುಪತ್ಯೆಗಾರ ಮನು, ಗ್ರಾಮಸ್ಥರು ಹಾಜರಿದ್ದರು.