ಗುಡ್ಡೆಹೊಸೂರು, ಮಾ. ೨೬: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಮೂರನೇ ವರ್ಷದ ಮಹಾಪೂಜೆಯು ಅದ್ಧೂರಿಯಾಗಿ ನಡೆಯಿತು. ಈ ಸಂದರ್ಭ ಹೋಮ ಮತ್ತು ವಿವಿಧ ಪೂಜಾ ಕಾರ್ಯಗಳು ನಡೆಯಿತು. ಗ್ರಾಮದ ಸುತ್ತಮುತ್ತಲಿನ ನೂರಾರು ಮಂದಿ ಭಕ್ತರು ಈ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯ ನಡೆಯಿತು. ಈ ಸಂದರ್ಭ ದೇವಸ್ಥಾನ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.