ಗೋಣಿಕೊಪ್ಪ, ಮಾ. ೨೭: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ನಲ್ವತ್ತೋಕ್ಲು ಗ್ರಾಮದ ಅಚ್ಚಯ್ಯ (೨೫) ಮೃತಪಟ್ಟ ವ್ಯಕ್ತಿ. ಮುಂಜಾನೆ ವೇಳೆ ಅಚ್ಚಯ್ಯ ವೀರಾಜಪೇಟೆಯಿಂದ ಗೋಣಿಕೊಪ್ಪಕ್ಕೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಾತೂರು ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಸಿಪಿಐ ವಸಂತ್ ಕುಮಾರ್ ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸಿದ್ದರಾಜು ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದರು. -ಹೆಚ್.ಕೆ.ಜಗದೀಶ್