ಶನಿವಾರಸಂತೆ, ಮಾ. ೨೬: ಪಟ್ಟಣದ ಶ್ರೀರಾಮ ಮಂದಿರದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮೂಲ ವಿಗ್ರಹಗಳಿಗೆ ಪಂಚಾಮೃತ ಅಭಿಷೇಕ, ವಿಷ್ಣು ಸೂಕ್ತ, ಪುರುಷ ಸೂಕ್ತ, ಶ್ರೀ ಸೂಕ್ತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಿ ಪೂಜಿಸ ಲಾಯಿತು. ಭಕ್ತಾದಿಗಳಿಗೆ ಬೇವು-ಬೆಲ್ಲ ಸಹಿತ ಪ್ರಸಾದ ವಿನಿಯೋಗವಾಗಿ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಪ್ರಧಾನ ಅರ್ಚಕ ಪ್ರಸನ್ನ ರಾವ್ ಅವರಿಂದ ಪೂಜಾ ಕೈಂಕರ್ಯಗಳು ನೆರವೇರಿ, ಪಂಚಾAಗ ಶ್ರವಣ ನಡೆಯಿತು. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಶ್ರೀರಾಮ ಮಂದಿರ ಸೇವಾ ಸಮಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.