ಮಡಿಕೇರಿ, ಮಾ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ವಿಭಾಗ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಕ್ಷಯರೋಗ ದಿನಾಚರಣೆ’ ಕಾರ್ಯಕ್ರಮದ ಜಾಥಾಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಶುಕ್ರವಾರ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ್ ಅವರು ಆರೋಗ್ಯ ಇದ್ದಲ್ಲಿ ಭಾಗ್ಯವಿದ್ದಂತೆ. ಆದ್ದರಿಂದ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದರು.
ಕ್ಷಯ ರೋಗವು ಹಲವು ದಶಕಗಳಿಂದ ಇದ್ದು, ಕ್ಷಯರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಪಣ ತೊಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ಷಯರೋಗ ವಿಭಾಗದ ಮುಖ್ಯಸ್ಥ ರಾಮಚಂದ್ರ ಕಾಮತ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಆನಂದ್, ಡಾ. ಗೋಪಿನಾಥ್, ಡಾ. ಸತೀಶ್, ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ. ರವೀಂದ್ರ ರೈ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಸಾದ್ ಗೌಡ, ಇತರರು ಇದ್ದರು.
ಜಾಥಾವು ನಗರದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಬಾಲಭವನ ತಲುಪಿತು. ಜಾಥಾದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿವಿಧ ಹಂತದ ಅಧಿಕಾರಿಗಳು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು ಇತರರು ಪಾಲ್ಗೊಂಡಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ೨೦೨೫ ರೊಳಗೆ ರಾಷ್ಟçದಲ್ಲಿ ಕ್ಷಯರೋಗ ನಿರ್ಮೂಲನೆಗೆ ಪಣತೊಡಬೇಕು ಎಂದರು. ದೇಶದಲ್ಲಿ ಈಗಾಗಲೇ ಪೋಲಿಯೋ ನಿರ್ಮೂಲನೆ ಆಗಿದ್ದು, ಅದರಂತೆ ಕ್ಷಯರೋಗವು ಸಹ ಇಲ್ಲದಂತೆ ಮಾಡುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಮಾತನಾಡಿ, ಕ್ಷಯರೋಗವು ಶ್ವಾಸಕೋಶಗಳಲ್ಲದೇ ದೇಹದ ಎಲ್ಲಾ ಅಂಗಗಳಿಗೂ ವ್ಯಾಪಿಸುತ್ತದೆ. ಶ್ವಾಸಕೋಶದ ಕ್ಷಯವು ಶೇ. ೭೦-೮೦ ರಷ್ಟು ಇದ್ದು ಕ್ಷಯರೋಗದ ಹರಡುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ರೋಗಿಯು ಕೆಮ್ಮಿದಾಗ ಕಫದ ತುಂತುರು ಹನಿಗಳು ವಾತಾವರಣಕ್ಕೆ ತೂರಲ್ಪಡುತ್ತವೆ. ಅಂತಹ ಗಾಳಿಯನ್ನು ಇತರರು ಉಸಿರಾಡಿದಾಗ ಕ್ಷಯರೋಗದ ಸೋಂಕು ಹರಡುತ್ತದೆ. ಆದ್ದರಿಂದ ಕೆಮ್ಮುವಾಗ ಮತ್ತು ಸೀನುವಾಗ ಕಡ್ಡಾಯವಾಗಿ ಕರವಸ್ತç ಬಳಸಬೇಕು ಎಂದು ಅವರು ಸಲಹೆ ನೀಡಿದರು. ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ ಮಾತನಾಡಿ, ಎರಡು ವಾರಕ್ಕಿಂತಲೂ ಹೆಚ್ಚು, ಕಫ ಬರುವುದು, ಕಫದಲ್ಲಿ ಒಮ್ಮೊಮ್ಮೆ ರಕ್ತ ಕಾಣಿಸಿಕೊಳ್ಳುವುದು. ಹಸಿವು ಮತ್ತು ತೂಕ ಕಡಿಮೆಯಾಗುವುದು. ಸಂಜೆಯ ಕಾಲ ಏರುವ ಜ್ವರ, ರಾತ್ರಿ ಮೈ ಬೆವರುವುದು. ಎದೆ ನೋವು ಮತ್ತು ಉಸಿರಾಡಲು ತೊಂದರೆ ಕಂಡುಬAದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ಷಯರೋಗ ವಿಭಾಗದ ಮುಖ್ಯಸ್ಥ ಡಾ. ರಾಮಚಂದ್ರ ಕಾಮತ್ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು ೨೦೩೦ನೇ ಸಾಲಿಗೆ ಕ್ಷಯರೋಗ ನಿರ್ಮೂಲನೆ ಮಾಡುವ ಸಲುವಾಗಿ ಅನೇಕ ನೂತನ ರೂಪುರೇಷೆಗಳನ್ನು ಹಾಕಿಕೊಂಡು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ಆನಂದ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಆರ್‌ಎನ್‌ಟಿಸಿಪಿ ಕಾರ್ಯಕ್ರಮವು ೨೦೦೪ನೇ ಏಪ್ರಿಲ್-೧೫ ರಂದು ಪ್ರಾರಂಭಗೊAಡಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ೨೦೨೨ ಡಿಸೆಂಬರ್ ಅಂತ್ಯದವರೆಗೆ ಸುಮಾರು ೭೯೯೨ ರೋಗಿಗಳನ್ನು ಚಿಕಿತ್ಸೆಗೆ ಗುರುತಿಸಿ ಚಿಕಿತ್ಸೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ೨೦೨೨ನೇ ಸಾಲಿನಲ್ಲಿ ಒಟ್ಟು ೧೨,೪೭೧ ಶಂಕಿತ ರೋಗಿಗಳನ್ನು ಕಫ ಪರೀಕ್ಷೆಗೆ ಒಳಪಡಿಸಿದ್ದು, ಅವುಗಳಲ್ಲಿ ಒಟ್ಟು ೪೦೦ ಕ್ಷಯ ರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗಿದೆ ಎಂದರು.
೨೦೨೨ನೇ ಸಾಲಿನಲ್ಲಿ ಚಿಕಿತ್ಸೆಗೆ ದಾಖಲಾದ ಎಲ್ಲಾ ಕ್ಷಯರೋಗಿಗಳಿಗೆ ಎಚ್.ಐ.ವಿ. ಪರೀಕ್ಷೆ ಮಾಡಿದ್ದು, ಅವುಗಳಲ್ಲಿ ೧೪ ಕ್ಷಯರೋಗಿಗಳಿಗೆ ಎಚ್.ಐ.ವಿ. ಸೋಂಕು ಇದ್ದು, ಎಲ್ಲಾ ರೋಗಿಗಳಿಗೆ ಸಿ.ಪಿ.ಟಿ. ಮತ್ತು ಎ.ಆರ್.ಟಿ. ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ೨೦೨೨ನೇ ಸಾಲಿನಲ್ಲಿ ಒಟ್ಟು ೮ ಎಂ.ಡಿ.ಆರ್. ಕ್ಷಯರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ನೂತನ ಮಾರ್ಗಸೂಚಿಯಂತೆ ಪತ್ತೆ ಹಚ್ಚಿದ ಎಲ್ಲಾ ಕ್ಷಯರೋಗಿಗಳಿಗೆ ಮಧುಮೇಹ ರೋಗದ ಪರೀಕ್ಷೆಯನ್ನು ಸಹ ಮಾಡಿದ್ದು, ಅವುಗಳಲ್ಲಿ ೬೯ ಮಧುಮೇಹ ರೋಗಿಗಳನ್ನು ಪತ್ತೆ ಹಚ್ಚಲಾಗಿದೆ ಅವರುಗಳಿಗೆ ಮಧುಮೇಹ ಚಿಕಿತ್ಸೆಯನ್ನು ಸಹ ನೀಡಲಾಗುತ್ತ್ತಿದೆ.
೨೦೨೩ನೇ ಸಾಲಿನ ಜನವರಿಯಿಂದ ಮಾರ್ಚ್ ೨೦ರ ವರೆಗೆ ಒಟ್ಟು ೮೩ ಕ್ಷಯರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಆನಂದ್ ಅವರು ವಿವರಿಸಿದರು.
ಒಟ್ಟಾರೆ ಜಿಲ್ಲೆಯಲ್ಲಿ ೧೯೮ ಕ್ಷಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ೨೦೨೧ನೇ ಸಾಲಿನಲ್ಲಿ ನೋಂದಣಿಯಾದ ಕ್ಷಯರೋಗಿಗಳಲ್ಲಿ ೩೯೪ ರೋಗಿಗಳಲ್ಲಿ ೩೫೫ ರೋಗಿಗಳು ಗುಣ ಮುಖರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ. ರವೀಂದ್ರ ರೈ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.