ಕೂಡಿಗೆ, ಮಾ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಿದೇವನ ಹೊಸೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳು ದಾಳಿ ನಡೆಸಿ ಕೃಷಿ ಫಸಲನ್ನು ನಾಶ ಪಡಿಸುತ್ತಿವೆ.
ಆನೆಕಾಡಿನ ಕಡೆಯಿಂದ ಬಂದಿರುವ ಕಾಡಾನೆಗಳು ಬೆಂಡೆಬೆಟ್ಟದ ಮೀಸಲು ಅರಣ್ಯ ಪ್ರದೇಶದ ಮೂಲಕ ಬಂದು ಹಾರಂಗಿ ನದಿಯನ್ನು ದಾಟಿ ಕಾಳಿದೇವನ ಹೊಸೂರು ಗ್ರಾಮಕ್ಕೆ ಲಗ್ಗೆ ಇಟ್ಟಿವೆ. ಶಿವಪ್ರಕಾಶ್ ಎಂಬವರ ಜಮೀನಿಗೆ ದಾಳಿ ಮಾಡಿ, ಅಡಿಕೆ ಸೇರಿದಂತೆ ಇನ್ನಿತರ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿವೆ. ಸ್ಥಳಕ್ಕೆ ಹುದುಗೂರು ಉಪ ವಲಯ ಅರಣ್ಯ ಅಧಿಕಾರಿ ಸತೀಶ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿದ್ದಾರೆ.