ಗೋಣಿಕೊಪ್ಪಲು, ಮಾ. ೨೮: ಪೊನ್ನಪ್ಪಸಂತೆಯಲ್ಲಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಲೋಕಾರ್ಪಣೆ ಮಾಡಿದ್ದಾರೆ.

ದಕ್ಷಿಣ ಕೊಡಗಿನ ಬಾಳೆಲೆ ಹೋಬಳಿಯ ಪೊನ್ನಪ್ಪಸಂತೆ ಪಟ್ಟಣದಲ್ಲಿ ಸೂಕ್ತವಾದ ತಂಗುದಾಣ ವಿಲ್ಲದೆ ಈ ಭಾಗದ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಕಷ್ಟ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ಸಮೀಪದ ಅಂಗಡಿ ಹಾಗೂ ಮರದಡಿಯಲ್ಲಿ ನಿಂತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ಸದಸ್ಯ ಆದೇಂಗಡ ವಿನು ಚಂಗಪ್ಪ ಈ ಬಗ್ಗೆ ಶಾಸಕರ ಗಮನ ಸೆಳೆದಿದ್ದರು. ತಂಗುದಾಣ ಉದ್ಘಾಟಿಸಿ ಮಾತನಾಡಿದ ಕೆ.ಜಿ. ಬೋಪಯ್ಯ ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮ ನಡೆದಿದೆ ಇದರ ಸಾಲಿಗೆ ಈ ತಂಗುದಾಣವು ಸೇರಿದೆ. ಇದರ ಶುಚಿತ್ವ ಕಾಪಾಡಿಕೊಳ್ಳುವಂತೆ ಗ್ರಾಮಸ್ಥರಿಗೆ ಕರೆ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಯಕಪೂವಂಡ ಪ್ರಭಾ, ಸದಸ್ಯರಾದ ಆದೇಂಗಡ ವಿನು ಚಂಗಪ್ಪ, ಗ್ರಾಮದ ಹಿರಿಯರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.