ಶನಿವಾರಸಂತೆ, ಮಾ. ೨೮: ಸ್ಥಳೀಯ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಶಾರದಾ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶೈಕ್ಷಣಿಕ ಅಡಿಪಾಯವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ನಾವು ಹಾಕಿಕೊಡಲಾಗಿದ್ದು ಮುಂದಿನ ಶೈಕ್ಷಣಿಕ ಹಂತದಲ್ಲಿ ಸರಿಯಾದ ಮಾರ್ಗದಲ್ಲಿ ಸಾಗುವ ಹಾಗೂ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯವನ್ನು ಸರಿಯಾದ ನಿಟ್ಟಿನಲ್ಲಿ ರೂಪಿಸಿಕೊಳ್ಳುವಂತೆ ಪ್ರಾಂಶುಪಾಲೆ ಡಿ. ಸುಜಲಾದೇವಿಯವರು ಕರೆ ನೀಡಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.