ಮಡಿಕೇರಿ, ಮಾ. ೨೮: ನೇಣು ಬಿಗಿದುಕೊಂಡು ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಹೊಸಬಡಾವಣೆಯಲ್ಲಿ ನಡೆದಿದೆ.
ಭೂಮಿಕಾ (೨೮) ಎಂಬಾಕೆ ಆತ್ಮಹತ್ಯೆಗೆ ಶರಣಾದ ಮಹಿಳೆ. ಹೊಸಬಡಾವಣೆ ನಿವಾಸಿ ರವೀಂದ್ರಕುಮಾರ್ ಎಂಬವರ ಪುತ್ರಿ ಭೂಮಿಕಾಳನ್ನು ಎರಡು ವರ್ಷಗಳ ಹಿಂದೆ ಪುತ್ತೂರಿನ ಕೆವಿನ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ಕೆವಿನ್ ನೌಕಾಪಡೆಯಲ್ಲಿ ಉದ್ಯೋಗಿಯಾಗಿರುವ ಕಾರಣ ಭೂಮಿಕಾ ತಂದೆ ಮನೆಯಲ್ಲೇ ಇದ್ದಳು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆಕೆ ಇಂದು ಹಗಲು ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಹಾಗೂ ೧ ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾಳೆ. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.