ಮಡಿಕೇರಿ, ಮಾ. ೨೭: ಅಲ್ಪಸಂಖ್ಯಾತರಿಗಿದ್ದ ಮೀಸಲಾತಿ ಯನ್ನು ಸರಕಾರ ರದ್ದುಗೊಳಿಸಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಐಜಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಎಸ್‌ಡಿಪಿಐ ಪ್ರಮುಖ ಅಮಿನ್ ಮೊಹ್ಸಿನ್, ಅಲ್ಪಸಂಖ್ಯಾತರಿಗಿದ್ದ ಮೀಸಲಾತಿ ಯನ್ನು ರದ್ದು ಮಾಡಿರುವ ಸರಕಾರದ ಕ್ರಮ ಖಂಡನೀಯ ಎಂದರಲ್ಲದೆ, ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದು ಹೇಳಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್, ನಗರಸಭಾ ಸದಸ್ಯರುಗಳಾದ ಮನ್ಸೂರ್, ಬಷೀರ್ ಅಹ್ಮದ್, ಪಕ್ಷದ ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.