ವೀರಾಜಪೇಟೆ, ಮಾ. ೨೭: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ರೂ. ೮೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ಈ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ, ಪಟ್ರಪಂಡ ರಘು ನಾಣಯ್ಯ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.