ಸೋಮವಾರಪೇಟೆ, ಮಾ. ೨೮: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ-ಚನ್ನಾಪುರ ಗ್ರಾಮದ ರಾಮೇಶ್ವರ ಯೂತ್ ಕ್ಲಬ್ ವತಿಯಿಂದ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಿರಿಕರ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ದಾನಿಗಳಾದ ಚನ್ನಾಪುರ ಸಿ.ಎನ್. ಅಶ್ವಥ್ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು. ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಗ್ರಾಮೀಣ ಕ್ರೀಡೆಗಳು ಅತ್ಯವಶ್ಯಕವಾಗಿವೆ. ಈ ನಿಟ್ಟಿನಲ್ಲಿ ರಾಮೇಶ್ವರ ಯೂತ್ ಕ್ಲಬ್ನವರು ಪ್ರತಿವರ್ಷ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಗೌಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಈ. ವೆಂಕಟೇಶ್, ಗುತ್ತಿಗೆದಾರ ಸಿ.ಎನ್.ಅಶೋಕ್, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್, ಯೂತ್ ಕ್ಲಬ್ ಅಧ್ಯಕ್ಷ ವಿಜಯ್, ಕಾರ್ಯದರ್ಶಿ ವಂಶಿ, ನಿರ್ದೇಶಕ ಶಿವಣ್ಣ ಇದ್ದರು. ೧೧ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.