ಮಡಿಕೇರಿ, ಮಾ. ೨೭ : ಜನರಲ್ ಕೆ.ಎಸ್ ತಿಮ್ಮಯ್ಯ ಅವರ ೧೧೭ನೇ ಜನ್ಮದಿನದ ಅಂಗವಾಗಿ ನಗರದ ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಅಳವಡಿಸಲಾಗಿರುವ ತಿಮ್ಮಯ್ಯ ಅವರ ಪುತ್ಥಳಿಯ ಅನಾವರಣ ಕಾರ್ಯಕ್ರಮ ತಾ.೩೧ ರಂದು ನಡೆಯಲಿದೆ. ಶಾಲೆಯಲ್ಲಿ ನಿರ್ಮಾಣವಾಗಿರುವ ನೂತನ ಕೊಠಡಿಗಳ ಉದ್ಘಾಟನೆ ಕೂಡ ಈ ಸಂದರ್ಭ ನಡೆಯಲಿದೆ. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ ಮುತ್ತಪ್ಪ ಅವರು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದ ಕಾರ್ಯಪ್ಪ ಅವರು ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಗುವುದು.