ಸೋಮವಾರಪೇಟೆ, ಮಾ. ೨೭: ಇಲ್ಲಿನ ಮಹಿಳಾ ಸಹಕಾರ ಸಂಘದ ಆಶ್ರಯದಲ್ಲಿ ಸಮಾಜದ ಆವರಣದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಆಯುರ್ವೇದ ತಜ್ಞ ವೈದ್ಯರಾದ ಕೆ.ಎಸ್. ಶ್ವೇತಾ ಉದ್ಘಾಟಿಸಿದರು. ನಂತರ ಮಾತನಾಡಿ, ಭಾರತದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ಡಿಜಿಟಲ್ ತಂತ್ರಜ್ಞಾನದಲ್ಲಿ ಸಮಾಜ ಮುಂದುವರೆದಿದ್ದರೂ, ಇಂದಿಗೂ ಕೆಲವೆಡೆಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಸಮಾಜಕ್ಕೆ ಶೋಭೆಯಲ್ಲ ಎಂದರು.

ಮಹಿಳೆಯರು ತಮ್ಮ ರಕ್ಷಣೆಗೆ ಸ್ವ ರಕ್ಷಣಾ ಕಲೆಗಳನ್ನು ಕರಗತ ಮಾಡಿಕೊಂಡಲ್ಲಿ ಮಾತ್ರ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬಹುದು ಎಂದರು.

ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಲೀಲಾ ನಿರ್ವಾಣಿ, ಪದಾಧಿಕಾರಿಗಳಾದ ಜಲಜಾ ಶೇಖರ್, ಗಾಯತ್ರಿ ನಾಗರಾಜು, ವಿಜಯಲಕ್ಷಿö್ಮÃ ಸುರೇಶ್, ಗೀತಾ ರಾಜು, ಚಂದ್ರಕಲಾ ಗಿರೀಶ್, ದಾಕ್ಷಾಯಿಣಿ ಶಿವಾನಂದ್, ವರಲಕ್ಷಿö್ಮÃ ಸಿದ್ಧೇಶ್ವರ್, ಶೈಲಾ ವಸಂತ್ ಹಾಗೂ ಅಮಿತ ಪ್ರದೀಪ್ ಇದ್ದರು.

ಇದೇ ಸಂದರ್ಭ ಸಂಘದ ಹಿರಿಯ ಸದಸ್ಯೆ, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸದಸ್ಯರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.