ಚೆಯ್ಯಂಡಾಣೆ, ಮಾ. ೨೮: ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮಕ್ಕೆ ತೆರಳುವ ರಸ್ತೆಯು ಶೋಚನೀಯ ಸ್ಥಿತಿಯಲ್ಲಿದ್ದು ಹಲವಾರು ಬಾರಿ ಸಂಬAಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಮುಂಬರುವ ಚುನಾವಣೆಗೆ ಮುನ್ನ ಈ ರಸ್ತೆ ದುರಸ್ತಿ ಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಗ್ರಾಮಸ್ಥ ಪಿ.ಕೆ. ಸೋಮಯ್ಯ ಮಾತನಾಡಿ, ಈ ರಸ್ತೆಯು ಕಬ್ಬೆ ಜಲಪಾತ, ಕರಡ, ಕೀಮಲೆಕಾಡು ಗಿರಿಜನ ಕಾಲೋನಿ, ತಟ್ಟಮಕ್ಕಿ ಪೈಸಾರಿಗೆ ಸಂಪರ್ಕ ಕಲ್ಪಿಸುತ್ತದೆ. ಶಾಲಾ ವಿದ್ಯಾರ್ಥಿಗಳು ತೆರಳುವ ರಸ್ತೆಯಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆ ಮುಂಚಿತವಾಗಿ ರಸ್ತೆ ದುರಸ್ತಿಪಡಿಸದಿದಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.

ಗ್ರಾಮಸ್ಥ ಜೈನೀರ ರಾಜ್ ಕುಮಾರ್ ಮಾತನಾಡಿ, ಚೆಯ್ಯಂಡಾಣೆಯಿAದ ಚೇಲಾವರ ಗ್ರಾಮಕ್ಕೆ ತೆರಳುವ ರಸ್ತೆ ಸುಮಾರು ೧೦ ವರ್ಷದಿಂದ ದುರಸ್ತಿ ಕಂಡಿಲ್ಲ ಎಂದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಈರಪ್ಪ ಮಾತನಾಡಿ, ಈ ರಸ್ತೆಗೆ ಸಂಬAಧಪಟ್ಟAತೆ ಮೇಲಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ.

ಸಂಬAಧಪಟ್ಟ ಅಧಿಕಾರಿಗಳು ಸ್ವಂದಿಸಿ ಕೂಡಲೇ ರಸ್ತೆ ದುರಸ್ತಿಪಡಿಸಬೇಕಾಗಿ ಒತ್ತಾಯಿಸಿದರು.

ಈ ಸಂದರ್ಭ ಪ್ರತಿಭಟನೆಯ ಮಾಹಿತಿ ತಿಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಸ್ಥಳಕ್ಕಾಗಮಿಸಿ ಗ್ರಾಮಸ್ಥರ ಅಹವಾಲನ್ನು ಪಡೆದುಕೊಂಡು ಇದಕ್ಕೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದರು.

ಗ್ರಾಮಸ್ಥರು ರಸ್ತೆಯ ಅವ್ಯವಸ್ಥೆಯ ಬಗ್ಗೆ ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಗ್ರಾಮಸ್ಥರಾದ ಪಿ.ಪಿ. ಸೋಮ್ಮಣ್ಣ, ಸುಬ್ಬಯ್ಯ, ಪೊನ್ನಣ್ಣ, ಲೋಕೇಶ್, ಪವನ್, ತಮ್ಮು, ಉಮೇಶ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ತಿಲಕ, ರಾಜೇಶ್ ಪಿ.ಎಂ. ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.