ಮಡಿಕೇರಿ, ಮಾ. ೨೮: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳು ಹಾಗೂ ಯೂನಿಯನ್ ಸದಸ್ಯ ಸಂಘಗಳ ಕಾರ್ಯದರ್ಶಿಗಳಿಗೆ ಇತ್ತೀಚಿನ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ತಾ. ೨೯ ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿಯ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.