ಮಡಿಕೇರಿ, ಮಾ. ೨೯: ಜನ ಕಲ್ಯಾಣಕ್ಕಾಗಿ ಹತ್ತು ಹಲ ಕಾರ್ಯಕ್ರಮ ಗಳನ್ನು ರೂಪಿಸುವ ಸರ್ಕಾರ, ಇವುಗಳ ಪ್ರಾಮಾಣಿಕ ಅನುಷ್ಠಾನಕ್ಕೆ ಪೂರಕವಾಗಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ೨.೬೦ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ಕೇಂದ್ರ ಸಮಿತಿಯ ರಾಜ್ಯಾಧ್ಯಕ್ಷ ಡಿ. ಶಿವಶಂಕರ ಅವರು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಮಂಜೂ ರಾತಿಯ ೭.೭೩ ಲಕ್ಷ ಹುದ್ದೆಗಳಿವೆ. ಇದರಲ್ಲಿ ೫.೨೦ ಲಕ್ಷ ಹುದ್ದೆಗಳು ಭರ್ತಿಯಾಗಿವೆ. ಸುಮಾರು ೮೦ ಸಾವಿರ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು ೨೫ ಸಾವಿರÀ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಮುಖವಾಗಿ ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ಕೆ ಇವರುಗಳ ಅಗತ್ಯತೆ ಹೆಚ್ಚಾಗಿದೆ. ಹೀಗಿದ್ದೂ, ಪ್ರಸ್ತುತ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆಯೇ ಹೊರತು, ಅವುಗಳ ಅನುಷ್ಟಾನಕ್ಕೆÀ ಪೂರಕವಾಗಿ ಖಾಲಿ ಹುದ್ದೆಗಳ ಭರ್ತಿಯಾಗುತ್ತಿಲ್ಲ ವೆಂದು ಟೀಕಿಸಿದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ ೨೦೦೧ ರಿಂದಲೇ ೨೦ ಸಾವಿರಕ್ಕೂ ಹೆಚ್ಚಿನ ‘ಬ್ಯಾಕ್ ಲಾಗ್’ ಹುದ್ದೆಗಳು ಭರ್ತಿಯಾಗದೆ ಹಾಗೆಯೇ ಉಳಿದಿದೆ. ಇಂದು ಖಾಲಿ ಇರುವ ಹುದ್ದೆಗಳ ಭರ್ತಿಗೆ ಬದಲಾಗಿ ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಂಡು ಅವರನ್ನು ಶೋಷಣೆಗೆ ಒಳಪಡಿಸ ಲಾಗುತ್ತಿದೆ ಎಂದು ಆರೋಪಿಸಿದ ಶಿವಶಂಕರ, ಹೊರ ಗುತ್ತಿಗೆ ನೌಕರರನ್ನು ಖಾಯಂ ಗೊಳಿಸಬೇಕೆಂದು ಒತ್ತಾಯಿಸಿದರು. ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರು ಮುಂಬಡ್ತಿ ಇಲ್ಲದೆ ಶೋಷಣೆೆಗೆ ಒಳಗಾಗಿದ್ದಾರೆ. ಯಾವುದೇ ಇಲಾಖೆಯಲ್ಲಿ ನೌಕರರ ಜೇಷ್ಠತಾ ಪಟ್ಟಿ ಇಲ್ಲದಿರುವುದು ಮುಂಬಡ್ತಿಗೆ ತೊಡಕನ್ನುಂಟು ಮಾಡುತ್ತಿದೆ, ತಕ್ಷಣ ಎಲ್ಲಾ ಇಲಾಖೆಗಳಲ್ಲು ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಮುಂಬಡ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮೀಸಲಾತಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಸುದೀರ್ಘ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ.೧೭ ರ ಮೀಸಲಾತಿಗೆ ಮತ್ತೆ ಶೇ.೭ ರಷ್ಟು ಮೀಸಲಾತಿ ಸೇರಿಸುವುದಾಗಿ ತಿಳಿಸಿ ಮೂಗಿಗೆ ತುಪ್ಪ ಸವರಿದೆÉ. ಮೀಸಲಾತಿಯ ಹೆಚ್ಚಳದ ಬಗ್ಗೆ ಲೋಕಸಭೆಯಲ್ಲಿ ಚರ್ಚಿತವಾಗಿ ರಾಷ್ಟçಪತಿಗಳ ಅಂಕಿತ ಬೀಳುವುದು ಅವಶ್ಯ. ಆದರೆ, ರಾಜ್ಯ ಸರ್ಕಾರ ಇಂತಹ ಪ್ರಸ್ತಾವನೆಯನ್ನೆ ಕೇಂದ್ರಕ್ಕೆ ಕಳುಹಿಸಿಲ್ಲವೆಂದು ಗಂಭೀರ ಆರೋಪ ಮಾಡಿದರು. ಸರ್ಕಾರಿ ನೌಕರರ ಬೆÉÃಡಿಕೆಯಂತೆ ಎನ್ಪಿಎಸ್ ಪಿಂಚಣಿ ಯೋಜನೆಯ ಬದಲು ಹಳೆಯ ಪಿಂಚಣಿ ಯೋಜನೆಯನ್ನೆ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕವನ್ನು ಮರು ರಚಿಸಲಾಗಿದ್ದು, ಅಧ್ಯಕ್ಷರಾಗಿ ಎಂ.ಎಸ್. ಮಹೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಮೌಳಿ, ಕೋಶಾಧ್ಯಕ್ಷರಾಗಿ ಜಿ. ಮಂಜುನಾಥ್, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ನಂದೀಶ್ ಕುಮಾರ್, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾಗಿ ಟಿ.ಎಸ್. ಮಹೇಶ್, ಮಡಿಕೇರಿ ತಾಲೂಕು ಅಧ್ಯಕ್ಷÀರಾಗಿ ಎಂ.ಎನ್. ಜನಾರ್ಧನ, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಬಿ.ಎಸ್. ದಿನೇಶ್ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಎಸ್.ಕೆ. ರಾಣಿ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಸಂಘÀಟನೆಯ ರಾಜ್ಯ ಉಪಾಧ್ಯಕ್ಷ ಕೆಂಪ ಸಿದ್ದಯ್ಯ, ಪದಾಧಿಕಾರಿಗಳಾದ ಸಿದ್ದರಾಜು, ಅರುಣ್, ಸತೀಶ್, ಮುತ್ತಪ್ಪ ಅವರು ಉಪಸ್ಥಿತರಿದ್ದರು.