ಮಡಿಕೇರಿ, ಮಾ. ೨೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ೫೭ ಮಂದಿಗೆ ಸಾಗುವಳಿ ಚೀಟಿಯನ್ನು ಶಾಸಕ ಕೆ.ಜಿ. ಬೋಪಯ್ಯ ಮಂಗಳವಾರ ವಿತರಿಸಿದರು.

ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಿಸಿ ಮಾತನಾಡಿದ ಶಾಸಕರು, ಮಡಿಕೇರಿ ತಾಲೂಕಿನ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೭೦೫ ಅರ್ಜಿಗಳಲ್ಲಿ ೫೪೫ ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, ೩೧ ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಹಕ್ಕುಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬAದಲ್ಲಿ ಕಾನೂನು ಉಲ್ಲಂಘಿಸಿ ದಂತಾಗುತ್ತದೆ ಎಂದು ಎಚ್ಚರಿಸಿದರು.

ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ ರೂ. ೧೦ ಸಾವಿರ ಸಹಾಯಧನ, ಟಾರ್ಪಲ್ ವಿತರಣೆ, ಕೃಷಿ ಪಂಪ್‌ಸೆಟ್ ಅಳವಡಿಕೆ, ಸಹಾಯಧನದಡಿ ಬಿತ್ತನೆ ಬೀಜ, ಕೃಷಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಕೃಷಿಕರು ಸ್ವಾವಲಂಬನೆಯಿAದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಈಗಾಗಲೇ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ೭೦೫ ಅರ್ಜಿಗಳಲ್ಲಿ ೫೪೫ ಅರ್ಜಿಗಳಿಗೆ ಸಾಗುವಳಿ ಚೀಟಿ ನೀಡಲಾಗಿದೆ. ೫ ಅರ್ಜಿಗಳಿಗೆ ಆಕ್ಷೇಪವಿತ್ತು, ಅದರಲ್ಲಿ ನಾಲ್ಕನ್ನು ಇತ್ಯರ್ಥಪಡಿಸಲಾಗಿದೆ.

ಅಕ್ರಮ-ಸಕ್ರಮದಡಿ ಅರ್ಜಿ ಸಲ್ಲಿಸಿದ ಅರ್ಹರೆಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನಿಸಲಾಗಿದ್ದು, ಸಾಗುವಳಿ ಚೀಟಿ ಪಡೆದವರು ಸಹಕಾರ ಸಂಘದ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ ಎಂದರು.

ಅಕ್ರಮ-ಸಕ್ರಮ ಸಮಿತಿ ಸದಸÀ್ಯರಾದ ಕವಿತಾ ಪ್ರಭಾಕರ್, ಮಿಟ್ಟು ರಂಜಿತ್, ಪೆರಾಜೆಯ ಸುಭಾಷ್, ಕಂದಾಯ ಇಲಾಖೆಯ ಸದಾಶಿವ ಇತರರು ಇದ್ದರು.