ಕುಶಾಲನಗರ, ಮಾ. ೨೮: ಕರ್ನಾಟಕ ಜಾನಪದ ಪರಿಷತ್ತು ಕೊಡಗು ಜಿಲ್ಲೆ ಮತ್ತು ಕುಶಾಲನಗರ ತಾಲೂಕು ಘಟಕಗಳ ಆಶ್ರಯದಲ್ಲಿ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಆಡಳಿತ ಸಮಿತಿ ಸಹಯೋಗದೊಂದಿಗೆ ದೇವಾಲಯದ ರಥೋತ್ಸವ ಅಂಗವಾಗಿ ಹಳ್ಳಿ ಹಬ್ಬ ಗ್ರಾಮೀಣ ಕ್ರೀಡಾಕೂಟ ತಾ. ೨೯ ರಂದು (ಇಂದು) ಕಣಿವೆ ರಾಮಲಿಂಗೇಶ್ವರ ದೇವಾಲಯ ಆವರಣದಲ್ಲಿ ನಡೆಯಲಿದೆ. ಬೆಳಿಗ್ಗೆ ೧೦:೩೦ಕ್ಕೆ ಕುಶಾಲನಗರ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಮತ್ತು ಜಾನಪದ ಪರಿಷತ್ತು ಜಿಲ್ಲಾ ಖಜಾಂಚಿ ಸಂಪತ್ ಕುಮಾರ್ ಸರಳಾಯ ಅವರುಗಳು ಕ್ರೀಡಾಕೂಟ ಮತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಕಣಿವೆ ಭಾರದ್ವಾಜ್ ಆನಂದ ತೀರ್ಥ, ಜಾನಪದ ಪರಿಷತ್ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ. ಅನಿಲ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕಿ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.