ಕೂಡಿಗೆ, ಮಾ. ೨೮ : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ಕಳೆದ ಒಂದು ವಾರದಿಂದಲೂ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗಿ ನೀರಿಗಾಗಿ ಪರದಾಡುವಂತಹ ಪ್ರಸಂಗ ಎದುರಾದ ಹಿನ್ನೆಲೆಯಲ್ಲಿ ಅಲ್ಲಿನ ನೂರಾರು ಗ್ರಾಮಸ್ಥರು ಕೂಡಿಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಖಾಲಿ ಬಿಂದಿಗೆಗಳನ್ನು ಇಟ್ಟು ಪ್ರತಿಭಟನೆ ಮಾಡಿದ ಪ್ರಸಂಗ ನಡೆಯಿತು.
ಕುಡಿಯುವ ನೀರಿನ ಅಭಾವದ ಬಗ್ಗೆ ಅನೇಕ ಬಾರಿ ಮನವಿ ಪತ್ರವನ್ನು ಪಂಚಾಯಿತಿಗೆ ನೀಡಲಾಗಿದೆ. ಯಾವುದೇ ಪ್ರತಿಕ್ರಿಯೆ ದೊರಕದ ಕಾರಣ ಗ್ರಾಮಸ್ಥರು ಸೇರಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಬ್ಯಾಡಗೊಟ್ಟ ಹಾಡಿಯ ಮುಖಂಡ ವೈ.ಸಿ. ಮುತ್ತ ಹೇಳಿದರು.
ಈ ಸಂದರ್ಭದಲ್ಲಿ ಹಾಡಿಯ ಪ್ರಮುಖರಾದ ಬಾಬು, ಚಿಪ್ಪ, ಉಮೇಶ್, ರವಿ, ತಮ್ಮಣ್ಣ, ಕಾಳಯ್ಯ, ಮಣಿ ಸೇರಿದಂತೆ ಹಲವಾರು ಮಂದಿ ಇದ್ದರು.
ಗ್ರಾ.ಪಂ. ಸಭಾಂಗಣದಲ್ಲಿ ಸಭೆ ನಡೆಸುತ್ತಿದ್ದ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ ಅವರು ತಕ್ಷಣವೇ ಸಂಬAಧಿಸಿದ ವಿದ್ಯುತ್ ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಅದೇ ರೀತಿಯಲ್ಲಿ ಸಂಬAಧಿಸಿದ ವಿದ್ಯುತ್ ಇಲಾಖೆಯ ಅಧಿಕಾರಿಯನ್ನು ಕರೆಸಿ ಸಹಕಾರ ನೀಡುವಂತೆ ಕೋರಿದ ಮೇರೆಗೆ ನೀರನ್ನು ಒದಗಿಸುವ ಭರವಸೆ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.