ಮಡಿಕೇರಿ, ಮಾ. ೨೮: ನಗರೋತ್ಥಾನ ಯೋಜನೆಯಡಿ ನಗರದ ವಿವಿಧ ಕಡೆ ಕೈಗೊಳ್ಳಲಾಗಿರುವ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಂಗಳವಾರ ಉದ್ಘಾಟಿಸಿದರು. ನಗರದ ಹಲವು ಕಡೆಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗಿದೆ.

ಇನ್ನು ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸಬೇಕಿದ್ದು, ನಗರದ ಎಲ್ಲೆಡೆ ಸರ್ವಋತು ರಸ್ತೆ ನಿರ್ಮಿಸಲಾಗುತ್ತದೆ.

ಆ ನಿಟ್ಟಿನಲ್ಲಿ ಕಾಮಗಾರಿಯನ್ನು ಉದ್ಘಾಟಿಸಿದರು. ನಗರದ ಹಲವು ಕಡೆಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗಿದೆ.

ಇನ್ನು ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸಬೇಕಿದ್ದು, ನಗರದ ಎಲ್ಲೆಡೆ ಸರ್ವಋತು ರಸ್ತೆ ನಿರ್ಮಿಸಲಾಗುತ್ತದೆ.

ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಲಾಗುವುದು ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪೌರಾಯುಕ್ತ ವಿಜಯ, ನಗರಸಭಾ ಸದಸ್ಯರು ಇತರರು ಇದ್ದರು.