ಮಡಿಕೇರಿ, ಮಾ. ೨೮: ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೩.೬೫ ಕೋಟಿ ಅನುದಾನದಲ್ಲಿ ನಿರ್ಮಾಣವಾದ ರಸ್ತೆ ಕಾಮಗಾರಿಯನ್ನು ಹಾಗೂ ಕುಂಜಿಲ ವಿವಿಧೋದ್ದೆಶ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ಇದರೊಂದಿಗೆ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೧.೮೧ ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಕಗ್ಗೋಡ್ಲು ಗ್ರಾಮದ ಶಾಲೆಯಿಂದ ಕಡಗದಾಳು ಸಂಪರ್ಕ ರಸ್ತೆಗೆ ಭೂಮಿಪೂಜೆ ನೆರವೇರಿಸಲಾಯಿತು.
ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೫.೫೦ ಕೋಟಿ ಅನುದಾನದಲ್ಲಿ ರಸ್ತೆ, ಸೇತುವೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.