ಮಡಿಕೇರಿ, ಮಾ. ೨೮: ರಾಜ್ಯದಲ್ಲಿ ಮೀಸಲಾತಿಯ ಸಂಬAಧ ಹಲವು ಮಹತ್ವದ ನಿರ್ಣಯಗಳನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ಕೈಗೊಂಡಿದೆ. ಇವು ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮಹತ್ವದ ನಿರ್ಣಯಗಳಾಗಿವೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಸಮರ್ಥಿಸಿದ್ದಾರೆ.

ಹಲವಾರು ದಶಕಗಳಿಂದ ಅನೇಕ ಬೇಡಿಕೆಗಳನ್ನು ಇಟ್ಟುಕೊಂಡು ಬಂದಿದ್ದಾರೆ. ನಮ್ಮ ರಾಜ್ಯ ಸರಕಾರವು ನ್ಯಾಯ ಕೊಡುವ ದೃಷ್ಟಿಯಿಂದ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದೆ. ಅಸೆಂಬ್ಲಿಯಲ್ಲಿ ಕಾನೂನು ಮಾಡಿ ಅನುಷ್ಠಾನ ಮಾಡುತ್ತಿದೆ. ಅದೇ ಆಧಾರದಲ್ಲಿ ನೇಮಕಾತಿ ಮಾಡಲು ಸರಕಾರ ಮುಂದಾಗುತ್ತಿದೆ. ಆರ್ಥಿಕ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಕೆಲವರಿಗೆ ಅವಕಾಶ ಕೊಡಬಹುದು. ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಂವಿಧಾನದಲ್ಲಿ ಯಾವುದೇ ಮೀಸಲಾತಿಗೆ ಅವಕಾಶ ಇಲ್ಲ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅದನ್ನು ಹೇಳಿದ್ದಾರೆ. ಆದರೆ, ಧಾರ್ಮಿಕ ಅಲ್ಪಸಂಖ್ಯಾತರನ್ನು ಕೈಬಿಡುವ ಬದಲು ಹಿಂದುಳಿದ ವರ್ಗದ ಪಟ್ಟಿಯಲ್ಲಿ ಆರ್ಥಿಕ ಮಿತಿ ಇದೆ. ಅವರ ಶೇ. ೪ ದಿಂದ ಶೇ. ೧೦ ಆರ್ಥಿಕ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಲು ತೀರ್ಮಾನ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.