ಮಡಿಕೇರಿ, ಮಾ. ೩೦: ೨೦೨೨-೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ತಾ. ೩೧ ರಿಂದ (ಇಂದಿನಿAದ) ಆರಂಭಗೊಳ್ಳಲಿದೆ. ಜಿಲ್ಲೆಯಲ್ಲಿ ಸುಸೂತ್ರ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಏ. ೧೫ರ ತನಕ ಪರೀಕ್ಷೆ ನಡೆಯಲಿದ್ದು, ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ.

ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆಯಲ್ಲಿ ೧೫ ಹಾಗೂ ವೀರಾಜಪೇಟೆಯಲ್ಲಿ ೮ ಸೇರಿದಂತೆ ಒಟ್ಟು ೩೧ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ ಒಟ್ಟು ೧೭೦ ಪ್ರೌಢಶಾಲೆಗಳಿದ್ದು, ಈ ಬಾರಿ ೬೫೮೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿ ದ್ದಾರೆ. ಈ ಪೈಕಿ ೬೩೦೩ ವಿದ್ಯಾರ್ಥಿಗಳು ವಿವಿಧ ಶಾಲೆಗಳ ಮೂಲಕ ನೇರವಾಗಿ ಪರೀಕ್ಷೆ ಎದುರಿಸಲಿದ್ದಾರೆ. ೨೪೮ ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿದ್ದಾರೆ.

ವಿವಿಧ ಶಾಲೆಗಳ ಮೂಲಕ ಪರೀಕ್ಷೆ ಬರೆಯುತ್ತಿರುವವರಲ್ಲಿ ೩೨೭೩ ಬಾಲಕಿಯರು ಹಾಗೂ ೩೦೩೦ ಬಾಲಕರಿದ್ದಾರೆ. ಖಾಸಗಿ ಅಭ್ಯರ್ಥಿ ಗಳಲ್ಲಿ ೧೬೯ ಬಾಲಕಿಯರು ಹಾಗೂ ೧೧೫ ಬಾಲಕರು ಸೇರಿ ೨೮೪ ಮಂದಿ ಪರೀಕ್ಷೆಗೆ ಹೆಸರು ನೋಂದಾಯಿಸಿ ಕೊಂಡಿದ್ದಾರೆ.

ಸುಸೂತ್ರ ಪರೀಕ್ಷೆ ಪ್ರಕ್ರಿಯೆಗಾಗಿ ವಿವಿಧ ಇಲಾಖೆಗಳ ಸಹಕಾರವನ್ನು ಕೋರಲಾಗಿದೆ. ಪರೀಕ್ಷೆ ನಡೆಯುವ ದಿನಾಂಕಗಳAದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ಅನುಕೂಲವಾಗುವಂತೆ ಸಾಕಷ್ಟು ಬಸ್ ಸೌಲಭ್ಯಕ್ಕೆ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯನ್ನು ಕೋರಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯೊಂದಿಗೆ ಓರ್ವ ಪುರುಷ ಹಾಗೂ ಓರ್ವ ಮಹಿಳಾ ಆರಕ್ಷಕರು ಕರ್ತವ್ಯದಲ್ಲಿರುತ್ತಾರೆ.

ಕೋವಿಡ್ ಮುನ್ನೆಚ್ಚರಿಕೆ ಹಾಗೂ ತುರ್ತು ಆರೋಗ್ಯ ಸೇವೆಗೂ ಆರೋಗ್ಯ ಇಲಾಖೆ ಸಹಕಾರ ನೀಡಲಿದೆ. ವಿದ್ಯುತ್ ಅಡಚಣೆ ಯಾಗದಂತೆ ನೋಡಿಕೊಳ್ಳಲು ಸೆಸ್ಕ್ ಇಲಾಖೆಯನ್ನು ಕೋರಲಾಗಿದೆ.

ಒಟ್ಟು ೧೩ ರೂಟ್ ಆಫೀರ‍್ಸ್ ಕರ್ತವ್ಯದಲ್ಲಿರಲಿದ್ದು, ತಾಲೂಕುವಾರು ಸ್ಕಾ÷್ವಡ್‌ಗಳನ್ನು ಅಕ್ರಮ ತಡೆಗೆ ನಿಯೋಜಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗದಾಮಯ್ಯ ಅವರು ಮಾಹಿತಿ ನೀಡಿದ್ದಾರೆ.