ಕುಶಾಲನಗರ, ಮಾ. ೩೦: ಬಿಜೆಪಿ ಸರಕಾರ ದ್ವೇಷದ ರಾಜಕಾರಣದಲ್ಲಿ ತೊಡಗಿದ್ದು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ತಾ. ೨೮ ರ ಮಂಗಳವಾರದAದು ಪ್ರತಿಭಟನೆ ನಡೆಸಲಾಯಿತು.
ಬೈಚನಹಳ್ಳಿಯ ಮಾರಿಯಮ್ಮ ದೇವಾಲಯ ಬಳಿಯಿಂದ ಮರೆವಣಿಗೆ ನಡೆಸಿದ ಪ್ರತಿಭಟನಾಕಾರರು ಬಿಜೆಪಿ ಸರಕಾರದ ವಿರುದ್ದ ಧಿಕ್ಕಾರ ಕೂಗಿ ರಾಹುಲ್ ಗಾಂಧಿ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿರುವ ಬಗ್ಗೆ ಆಕ್ರೋಷ ವ್ಯಕ್ತಪಡಿಸಿದರು.
ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೋದಿ ವಿರುದ್ಧ ಘೋಷಣೆ ಕೂಗಿದರು.
ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ಟಿ.ಪಿ. ಹಮೀದ್, ಸುಂದರೇಶ್, ಶೇಖ್ ಖಲೀಮುಲ್ಲಾ, ಶಿವಶಂಕರ್, ಬಿ.ಡಿ. ಅಣ್ಣಯ್ಯ, ಅಬ್ದುಲ್ ರಜಾಕ್, ಅಬ್ದುಲ್ ಖಾದರ್, ಶಾಜಿ, ರಮೇಶ್, ಆದಂ, ನವೀನ್, ದೇವು ಮತ್ತಿತರರು ಪಾಲ್ಗೊಂಡಿದ್ದರು.