ಮಡಿಕೇರಿ, ಮಾ. ೩೧: ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಯಾರಾಗಬೇಕೆಂಬುದರ ಕುರಿತು ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ನಡೆಯಿತು.

ಜಿಲ್ಲೆಯ ೨ ವಿಧಾನಸಭಾ ಕ್ಷೇತ್ರಗಳಾದ ಮಡಿಕೇರಿ ಹಾಗೂ ವೀರಾಜಪೇಟೆ ಅಭ್ಯರ್ಥಿ ಯಾರಾಗಬೇಕೆಂಬುದರ ಕುರಿತು ಗೌಪ್ಯ ಮತದಾನದ ಮೂಲಕ ಅಭಿಪ್ರಾಯ ಪಡೆಯಲು ಬಿಜೆಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ನಡೆಯಿತು.