ಮಡಿಕೇರಿ, ಮಾ. ೩೧ : ಆಮಗ ಆದ್ಮಿ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಟಿ.ಕೆ. ಸಾಯಿಕುಮಾರ್ ಅವರು ಆಯ್ಕೆಯಾಗಿದ್ದಾರೆ. ರಾಜ್ಯದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ಬಿಡುಗಡೆ ಮಾಡಿದೆ.
ಜನಾಭಿಪ್ರಾಯ ಸಂಗ್ರಹ : ಕೊಡಗು ಜಿಲ್ಲೆಗೆ ಸೀಮಿತವಾಗಿ ಪ್ರಣಾಳಿಕೆ ತಯಾರಿಸಲು ಜಿಲ್ಲಾ ಆಮ್ ಆದ್ಮಿ ಪಾರ್ಟಿ ಜನಾಭಿಪ್ರಾಯ ಸಂಗ್ರಹ ಸಭೆ ನಡೆಸಿತು. ಪೊನ್ನಂಪೇಟೆಯ ಐಬಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡು ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಬೋಜಣ್ಣ ಸೋಮಯ್ಯ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ. ಸಂಘಟನಾ ಕಾರ್ಯದರ್ಶಿ ಎಂ.ಕೆ. ಅಪ್ಪಯ್ಯ, ಪೊನ್ನಪ್ಪ, ರವೀಂದ್ರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.