ಕೂಡಿಗೆ, ಮಾ. ೩೦: ಕೂಡಿಗೆ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ತಾ. ೨೮ ರ ಮಂಗಳವಾರದAದು ಗ್ಯಾರೆಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ಹಮೀದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಡಿಯ ನಿವಾಸಿಗಳಿಗೆ ಗ್ಯಾರೆಂಟಿ ಕಾರ್ಡ್ ವಿತರಿಸಿದರು.

ಕಾಂಗ್ರೆಸ್ ಮುಖಂಡ ಮಂಥರ್ ಗೌಡ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್, ಗ್ರಾಪಂ ಸದಸ್ಯರಾದ ಅನಂತ್, ಅರುಣ್‌ರಾವ್, ಐ.ಎನ್.ಟಿ.ಸಿ. ಪ್ರಮುಖ ಬಿ.ಡಿ. ಅಣ್ಣಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷಿö್ಮ, ಸಹಕಾರ ಸಂಘದ ನಿರ್ದೇಶಕ ನಾಗರಾಜ್, ಹಾಡಿಯ ಮುಖಂಡರಾದ ಮುತ್ತ, ಉಮೇಶ್, ರವಿ ಸೇರಿದಂತೆ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ ಗ್ರಾಮಸ್ಥರು ಹಾಜರಿದ್ದರು.