ಮಡಿಕೇರಿ, ಮಾ. ೩೧: ಬೆಂಗಳೂರಿನ ಹಲಸೂರಿನಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷರಾಗಿ ಸ್ವಾಮಿ ಬೋಧಸ್ವರೂಪಾನಂದ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ನಂತರ ಮೈಸೂರಿನಲ್ಲಿ ಸೇವೆ ಸಲ್ಲಿಸಿದ್ದರು. ಇದೀಗ ಹಲಸೂರು ಮಠಕ್ಕೆ ನಿಯೋಜನೆ ಗೊಂಡಿದ್ದಾರೆ. ತಾ. ೬ ರಂದು ಅಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.