ವೀರಾಜಪೇಟೆ, ಮಾ. ೩೦: ನೆಲ್ಲಿಹುದಿಕೇರಿಯ ನಲ್ವತ್ತೆಕ್ರೆ ಗ್ರಾಮದ ಶ್ರೀ ಮಾರಿಯಮ್ಮ ದೇವಸ್ಥಾನದ ವಾರ್ಷಿಕೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸ ಲಾಯಿತು. ವಾರ್ಷಿಕೋತ್ಸವದಂದು ಮುಂಜಾನೆಯಿAದಲೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರ್ಚಕರು ಶ್ರೀ ದೇವಿಗೆ ವಿಶೇಷ ಅಲಂಕಾರವನ್ನು ಮಾಡಿದ್ದರು.
ಕುಂಕುಮಾರ್ಚನೆ, ಪುಷ್ಪಾರ್ಚನೆ, ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಪೂಜೆ ನೆರವೇರಿಸಿಕೊಟ್ಟರು. ತದನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.