ವೀರಾಜಪೇಟೆ, ಮಾ. ೩೧: ವೀರಾಜಪೇಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚೀಲದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಇಂಜಲಗೇರಿಯ ನಿವಾಸಿ ಪ್ರವೀಣ್ (೩೧) ಹಾಗೂ ವೀರಾಜಪೇಟೆ ಪಟ್ಟಣದ ಗಾಂಧಿ ನಗರ ನಿವಾಸಿ ಅಪ್ಸಲ್ (೨೨) ಬಂಧಿತರು. ಗುರುವಾರ ರಾತ್ರಿ ಬಸ್ ನಿಲ್ದಾಣದ ಬಳಿ ಗಾಂಜಾ ಮಾರುವುದಕ್ಕೆ ಹೊಂಚು ಹಾಕುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭ ಸಂಶಯಗೊAಡ ಪೊಲೀಸರು ಬ್ಯಾಗ್ ಪರಿಶೀಲಿಸಿದಾಗ ೧ ಕೆ.ಜಿ. ೨೨೫ ಗ್ರಾಂ ಗಾಂಜಾ ಪತ್ತೆಯಾಗಿದ್ದು ಈ ಸಂಬAಧ ಪ್ರವೀಣ್ ಮತ್ತು ಅಪ್ಸಲ್‌ನನ್ನು ಬಂಧಿಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಡಿ.ವೈ.ಎಸ್.ಪಿ. ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರ ಠಾಣಾಧಿಕಾರಿ ಮದನ್ ಕುಮಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.