ನಾಪೋಕ್ಲು, ಏ. ೧: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮೂರು ತಿಂಗಳುಗಳ ಕಾಲ ಆಯೋಜಿಸಿದ್ದ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನೆರವೇರಿಸಲಾಯಿತು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಿನೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಅತಿಥಿಯಾಗಿ ಭಾಗವಹಿಸಿದ್ದ ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಕೆ.ಎ. ಹ್ಯಾರಿಸ್, ಉಪ ಪ್ರಾಂಶುಪಾಲ ಶಿವಣ್ಣ, ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕ ಸಂತೋಷ್, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೇಯಮ್, ಎಸ್.ಡಿ.ಎಂ.ಸಿ. ಸದಸ್ಯರಾದ ರಾಜೇಶ್ ಗ್ರೇಸಿ, ಶಿಕ್ಷಕಿ ಉಷಾ ರಾಣಿ, ಶಾಲೆಯ ಸಿಬ್ಬಂದಿ ವರ್ಗ, ಸೇವಾ ಪ್ರತಿನಿಧಿ ಉಮಾಲಕ್ಷಿö್ಮ, ಜ್ಞಾನವಿಕಾಸ ಸಂಘಗಳ ಸದಸ್ಯರು ಹಾಗೂ ಮಕ್ಕಳ ಪೋಷಕರು ಹಾಜರಿದ್ದರು.