ವೀರಾಜಪೇಟೆ, ಮಾ. ೩೧: ವೀರಾಜ ಪೇಟೆ ಸಮೀಪದ ಕೆದಮುಳ್ಳೂರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿ ಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏ. ೧ ರಿಂದ ೩ ರವರೆಗೆ ನಡೆಯಲಿದೆ.
ಏ. ೧ ರಂದು ಕೊಟ್ಟಿಪಾಡುವು ದರೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಏ. ೨ ರಂದು ರಾತ್ರಿ ೮ ಗಂಟೆಗೆ ತಕ್ಕರ ಮನೆಯಿಂದ ಭಂಡಾರ ತರುವುದು, ಮೇಲೇರಿ ಹಾಕುವುದು, ನಾನಾ ತೆರೆ(ಕೋಲ)ಗಳು ನಡೆಯಲಿದೆ. ಏ. ೩ ರಂದು ಬೆಳಿಗ್ಗೆ ೭.೩೦ ಗಂಟೆಯ ಸುಮಾರಿಗೆ ಪ್ರಮುಖವಾದ ವಿಷ್ಣುಮೂರ್ತಿ ಕೋಲ ಮೇಲೇರಿ ನಡೆಯಲಿದೆ. ಬಳಿಕ ಮಧ್ಯಾಹ್ನ ೧೨ ರ ಸುಮಾರಿಗೆ ಇನ್ನೊಂದು ಪ್ರಮುಖವಾದ ಚಾಮುಂಡಿ ದೇವಿಯ ಕೋಲ ಜರುಗಲಿದೆ. ಮೂರು ಗಂಟೆಯ ವೇಳೆಗೆ ಶ್ರೀ ಚಾಮುಂಡಿ ದೇವರು ಬನಕ್ಕೆ ತೆರಳಲಿದೆ.
ಈ ಉತ್ಸವದ ಕೊನೆಯ ತೆರೆಯಾದ ಇದರಲ್ಲಿ ಕೆಂಪು ವಸ್ತçದ ತೆರೆ ಆಕರ್ಷಕವಾಗಿರುತ್ತದೆ. ಈ ತೆರೆಗೆ ಉದ್ದನೆಯ ಬಿದಿರಿನಿಂದ ತಯಾರಿಸಿದ, ಶೃಂಗಾರಗೊಳಿಸಿದ ಮುಡಿಯನ್ನು ಏರಿಸಲಾಗುತ್ತದೆ. ಇದು ಭಕ್ತರನ್ನು ಆಕರ್ಷಿಸುವುದಲ್ಲದೆ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡುತ್ತದೆ. ಸಂಜೆ ವೇಳೆಗೆ ದೇವರು ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ.
ಕೆದಮುಳ್ಳುರು ಚಾಮುಂಡಿ ಹಬ್ಬ ಎಂದರೆ ಎಲ್ಲೆಡೆ ಪ್ರಚಲಿತದಲ್ಲಿದ್ದು, ಅತ್ಯಂತ ಹೆಸರುವಾಸಿಯಾಗಿದೆ ಹಾಗೂ ಅತ್ಯಂತ ಶಕ್ತಿಯನ್ನು ಹೊಂದಿರತಕ್ಕAತಹ ಚಾಮುಂಡಿ ದೇವಿಯ ಕ್ಷೇತ್ರವಾಗಿದೆ. ಹಾಗಾಗಿ ಈ ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ದೂರ ದೂರದ ಊರುಗಳಿಂದ ಭಕ್ತರು, ಆಗಮಿಸಿ ದೇವರಲ್ಲಿ ಹರಕೆ ಹೊತ್ತುಕೊಂಡು ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ.