ಮೆಟ್ಟಿಲು ಬಾವಿ ಕುಸಿತ : ಮೃತರ ಸಂಖ್ಯೆ ೩೬ಕ್ಕೆ ಏರಿಕೆ
ಇಂದೋರ್, ಮಾ. ೩೧: ಇಂದೋರ್‌ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬAಧಿಸಿದAತೆ ಮೃತರ ಸಂಖ್ಯೆ ೩೬ಕ್ಕೆ ಏರಿಕೆಯಾಗಿದೆ. ಸ್ಥಳಕ್ಕೆ ತೆರಳಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಪ್ರಕರಣ ಸಂಬAಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಮ್ಯಾಜಿಸ್ಟೆçÃಟ್ ತನಿಖೆಗೂ ಆದೇಶಿಸಲಾಗಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಕೂಡ ಈಗಾಗಲೇ ಪರಿಹಾರಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ಇಂತಹ ಸ್ಟೆಪ್‌ವೆಲ್‌ಗಳು ಮತ್ತು ಬೋರ್‌ವೆಲ್‌ಗಳ ಪರಿಶೀಲನೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಎರಡು ಗುಂಪುಗಳ ನಡುವೆ ಘರ್ಷಣೆ - ಹಿಂಸಾಚಾರ
ಛತ್ರಪತಿ ಸಂಭಾಜಿನಗರ, ಮಾ. ೩೧: ಮಹಾರಾಷ್ಟçದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ಹಿಂಸಾತ್ಮಕ ರೂಪಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲೆಯ ಅಹೇರಿ ಗ್ರಾಮದಲ್ಲಿ ಇಂದು ನಸುಕಿನ ಜಾವ ಎರಡು ಗುಂಪುಗಳು ಹಿಂಸಾತ್ಮಕ ಕಲ್ಲು ತೂರಾಟದಲ್ಲಿ ತೊಡಗಿದ್ದವು. ಶಾಂತಿ ಕಾಪಾಡಲು ಸಿಆರ್‌ಪಿಎಫ್ ತಂಡ ಸೇರಿದಂತೆ ಭಾರಿ ಪೊಲೀಸ್ ಪಡೆಯನ್ನು ಅಹೇರಿಯಲ್ಲಿ ನಿಯೋಜಿಸಲಾಗಿದೆ. ಉನ್ನತ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಬೆಳವಣಿಗೆಗಳ ಮೇಲೆ ನಿಗಾ ಇರಿಸಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ. ಹಿಂಸಾಚಾರದಲ್ಲಿ ಒಬ್ಬರು ಮೃತಪಟ್ಟಿದ್ದರೆ ೧೫ ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಸುಮಾರು ೨೦ ಪೊಲೀಸ್ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವಾರು ಕಲ್ಲು ತೂರಾಟದ ಘಟನೆಗಳೂ ವರದಿಯಾಗಿವೆ.
ಬಿಜೆಪಿ, ಜೆಡಿಎಸ್ ಶಾಸಕರುಗಳ ರಾಜೀನಾಮೆ
ಶಿರಸಿ, ಮಾ. ೩೧: ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶುಕ್ರವಾರ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿರುವ ಗೋಪಾಲಕೃಷ್ಣ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ರಾಮಸ್ವಾಮಿ, ಈಗ ಪಕ್ಷ ತೊರೆಯಲು ಮುಂದಾಗಿದ್ದಾರೆ.
ಒಂದೆ ಕುಟುಂಬದ ನಾಲ್ವರು ಆತ್ಮಹತ್ಯೆ
ಮಂಗಳೂರು, ಮಾ. ೩೧: ಮಂಗಳೂರಿನ ಲಾಡ್ಜ್ನಲ್ಲಿ ಶುಕ್ರವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮೈಸೂರಿನ ವಿಜಯನಗರದ ದೇವೇಂದ್ರ, ಅವರ ಪತ್ನಿ ಮತ್ತು ೧೪ ಮತ್ತು ೧೦ ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ. ಕುಟುಂಬವು ಮೂರು ದಿನಗಳ ಹಿಂದೆ ಹೋಟೆಲ್ ರೂಂ ಕಾಯ್ದಿರಿಸಿತ್ತು, ಆರಂಭದಲ್ಲಿ ಅವರು ಒಂದು ದಿನ ಉಳಿಯಲು ಯೋಜಿಸಿದ್ದರು, ಕ್ರಮೇಣ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದರು.
ಇಂದು ಸಿಧು ಬಿಡುಗಡೆ ಸಾಧ್ಯತೆ
ಚಂಡೀಗಢ, ಮಾ. ೩೧: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಏಪ್ರಿಲ್ ೧ ರಂದು ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಅವರ ವಕೀಲ ಎಚ್‌ಪಿಎಸ್ ವರ್ಮಾ ಶುಕ್ರವಾರ ಹೇಳಿದ್ದಾರೆ. ೧೯೮೮ ರ ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಕಳೆದ ವರ್ಷ ಮೇ ೨೦ ರಂದು, ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸಿಧು ಅವರು ಸುಪ್ರೀಂ ಕೋರ್ಟ್ನಿಂದ ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ನಂತರ ಪಟಿಯಾಲದ ನ್ಯಾಯಾಲಯದ ಮುಂದೆ ಶರಣಾಗಿ ಜೈಲುಪಾಲಾದರು.
ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ?
ಬೆಂಗಳೂರು, ಮಾ. ೩೧: ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸುಳಿವು ನೀಡಿದ್ದಾರೆ. ಇದಕ್ಕೆ ಪಕ್ಷದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ನಾವು ಕಠಿಣ ಹೋರಾಟ ನಡೆಸುತ್ತೇವೆ. ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆದರೆ, ಅಂತಿಮ ನಿರ್ಧಾರವನ್ನು ಯಡಿಯೂರಪ್ಪ ಮತ್ತು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದರು.