ಮಡಿಕೇರಿ, ಮಾ. ೩೧: ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಚುನಾವಣಾ ಸಂಬAಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.