ಮಡಿಕೇರಿ, ಏ. ೧: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅರಣ್ಯ ಕಚೇರಿ ಮುಂದೆ ೧೭ ದಿನಗಳಿಂದ ನಡೆಸುತ್ತಿದ್ದ ಆಹೋರಾತ್ರಿ ಪ್ರತಿಭಟನೆಯನ್ನು ಪೊನ್ನಂಪೇಟೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಆದಿವಾಸಿಗಳನ್ನು ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆಗಳಿಗೆ ಅವಕಾಶ ಇಲ್ಲ. ನಿಮ್ಮ ಬೇಡಿಕೆಯನ್ನ ಜಿಲ್ಲಾಡಳಿತಕ್ಕೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು.

ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ಆದಿವಾಸಿಗಳನ್ನು ಅಧಿಕಾರಿಗಳ ತಂಡ ಮನವೊಲಿಸಿದರು.

ಅಧಿಕಾರಿಗಳ ಭರವಸೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಚುನಾವಣೆ ನಂತರ ಮತ್ತೆ ಪ್ರತಿಭಟನೆ ಮುಂದುವರಿಸುವುದಾಗಿ ಆದಿವಾಸಿ ಮುಖಂಡರು ಎಚ್ಚರಿಸಿದ್ದಾರೆ.