ಕೂಡಿಗೆ, ಏ. ೧: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಚೆಕ್‌ಪೋಸ್ಟ್ಗಳಲ್ಲಿ ಬಿಗು ತಪಾಸಣೆ ಆರಂಭಿಸಿದೆ. ಸೋಮವಾರಪೇಟೆ ವಿಭಾಗದ ಅಬಕಾರಿ ಉಪ ಅಧೀಕ್ಷಕಿ ಆರ್.ಎಂ.ಚೈತ್ರಾ ಮಾರ್ಗದರ್ಶನದಲ್ಲಿ ಕೂಡಿಗೆ ಸಮೀಪದ ಕೈಗಾರಿಕಾ ಕೇಂದ್ರದ ಮುಖ್ಯ ರಸ್ತೆಯಲ್ಲಿ ವಾಹನಗಳ ತಪಾಸಣೆ ಆರಂಭಿಸಲಾಗಿದ್ದು, ಜಿಲ್ಲೆಯಿಂದ ಹೊರ ಹೋಗುವ, ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತಾçಸ್ತç, ಉಡುಗೊರೆ, ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲ ವಾಹನಗಳನ್ನು ತಪಾಸಣೆಗೊಳಪಡಿಸಲಾಯಿತು. ಸಿಬ್ಬಂದಿಗಳಾದ ಮಹಾದೇವ್, ರಾಜೇಂದ್ರ ಇದ್ದರು.