ಚೆಯ್ಯಂಡಾಣೆ, ಏ. ೨. ಬೆಟ್ಟಗೇರಿಯಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಮಾರುತಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಂಜೆ ನಡೆದಿದೆ.
ದಾವಣಗೆರೆ ಮೂಲದ ಒಂದೇ ಕುಟುಂಬದ ೫ ಮಂದಿ ಭಾಗಮಂಡಲಕ್ಕೆ ತೆರಳುತ್ತಿದ್ದ ಮಾರುತಿ ವ್ಯಾಗನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಟ್ಟಗೇರಿ ಪಟ್ಟಣದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಪಿಕಪ್ ವಾಹನ ರಸ್ತೆಯ ಇನ್ನೊಂದು ಬದಿಗೆ ಸರಿದು ನಿಂತಿದೆ.ಅಪಘಾತದಿAದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ.
ಕಾರಿನಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.