ಕೂಡಿಗೆ, ಏ. ೨: ಹುದುಗೂರು ಗ್ರಾಮದ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮವು ತಾ. ೩ ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ, ಸೇರಿದಂತೆ ಇತ್ಯಾದಿ ಪೂಜೆಗಳು ನಡೆದು ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ, ಸಂಜೆ ೭ ಗಂಟೆಗೆ ದೀಪಾಲಂಕಾರ, ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.