ಮಡಿಕೇರಿ, ಏ. ೨: ಬಹುಜನ ಸಮಾಜವಾದಿ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಮಡಿಕೇರಿಯ ದಿವಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಭೀಮಪುತ್ರಿ ರೇವತಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ೫೩ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಲಾಗಿದೆ. ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿ ದಿವಿಲ್ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.