ಕೂಡಿಗೆ, ಏ. ೨: ಕೊಡಗು ನೂತನ ವಿಶ್ವವಿದ್ಯಾಲಯ ಅಧಿಕೃತವಾಗಿ ಮಾ.೨೮ ರಂದು ಉದ್ಘಾಟನೆಯಾಗಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಕ್ಕೆ ಸೂಕ್ತವಾದ ಲಾಂಛನ ಹಾಗೂ ಧ್ಯೇಯವಾಕ್ಯ ರೂಪಿಸಲು ಆಸಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅತ್ಯುತ್ತಮ ಲಾಂಛನ ಹಾಗೂ ಧ್ಯೇಯವಾಕ್ಯ ಸೂಚಿಸಿದವರಿಗೆ ಸೂಕ್ತ ಪುರಸ್ಕಾರ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ. ಕೊಡಗು ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಾರ್ವಜನಿಕರು ತೊಡಗಿಸಿಕೊಳ್ಳಬೇಕು. ಎಂದು ಪ್ರೊ. ಕೆ.ಕೆ. ಧರ್ಮಪ್ಪ ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಕೊನೆಯ ದಿನಾಂಕ ತಾ. ೧೫ ಆಗಿದ್ದು, ಹೆಚ್ಚಿನ ವಿವರಗಳಿಗೆ ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಕೆ.ಕೆ. ಧರ್ಮಪ್ಪ (ಮೊ.ನಂ.೯೦೦೮೧೬೨೮೬೨) ಜhಚಿಡಿmಚಿಠಿಠಿಚಿ@gmಚಿiಟ.ಛಿom ಸಂಪರ್ಕಿಸಬಹುದು ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಡಾ.ಅಶೋಕ್ ಎಸ್. ಅಲೂರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.