ವೀರಾಜಪೇಟೆ, ಏ. ೨: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಆರ್‌ಸಿ ಎಚ್ ಅಧಿಕಾರಿಗಳ ಸೂಚನೆ ಮೇರೆಗೆ ವೀರಾಜಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತುರ್ತು ಸಭೆಯನ್ನು ಆಯೋಜಿಸಿ ಆರೋಗ್ಯ ಮತ್ತು ಇತರ ವೈದ್ಯಕೀಯ ಸೇವೆಗಳಿಗೆ ಸಂಬAಧಪಟ್ಟ ವರದಿಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಲಾಯಿತು.

ಆಸ್ಪತ್ರೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಸೇವೆ ಕುಂಠಿತವಾಗಿದ್ದು ಈ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಸೇವೆಗಳನ್ನು ಉಪಯೋಗಿಸಿಕೊಂಡು ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಸೂಚಿಸಲಾಯಿತು. ಆಸ್ಪತ್ರೆಯ ತಜ್ಞ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಸರ್ಕಾರ ನಿಗದಿಪಡಿಸಿರುವ ಸಮಯದನ್ವಯ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಮತ್ತು ಹೊರಗುತ್ತಿಗೆ ಆಧಾರದ ಗ್ರೂಪ್ ಡಿ ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಸಮವಸ್ತç ಧರಿಸಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಯಿತು.

ಈ ಸಂದರ್ಭ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.