ರಾಹುಲ್‌ಗೆ ಜಾಮೀನು ಮಂಜೂರು

ಸೂರತ್, ಏ. ೩: ೨೦೧೯ರ ಮಾನಹಾನಿ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಮೇ ೩ಕ್ಕೆ ನಿಗದಿಪಡಿಸಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದ್ದು, ಆರೋಪಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್, ವಿಚಾರಣೆಯನ್ನು ಮೇ ೩ಕ್ಕೆ ಮುಂದೂಡಿದೆ. ೨೦೧೯ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಉಪನಾಮದ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು ಆಧರಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ, ಏ. ೩: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ತಾ. ೧೭ ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿದೆ. ಕೋರ್ಟ್ ಸಿಬಿಐ ಮನವಿಯನ್ನು ಪುರಸ್ಕರಿ ತಾ. ೧೭ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಈಗ ರದ್ದಾಗಿರುವ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬAಧಿಸಿದAತೆ ಸಿಬಿಐ ಸಿಸೋಡಿಯಾ ಅವರನ್ನು ಫೆಬ್ರವರಿ ೨೬ ರಂದು ಬಂಧಿಸಿದ್ದು, ಆಪ್ ನಾಯಕನಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.

ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ರಾಂಚಿ, ಏ. ೩: ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಭದ್ರತಾ ಪಡೆ ಎನ್ಕೌಂಟರ್ ನಡೆಸಿದ್ದು, ಐವರು ನಕ್ಸಲರನ್ನು ಹೊಡೆದುರುಳಿಸಿದೆ. ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ ಜೊತೆಗೆ ಪಲಾಮು ಮತ್ತು ಚತ್ರಾ ಜಿಲ್ಲೆಗಳ ಪೊಲೀಸ್ ಪಡೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಪಲಾಮು ಗಡಿಯಲ್ಲಿರುವ ಛಾತಾರಾದಲ್ಲಿನ ಲಾವಾಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಕೆಲವು ಮಾವೋವಾದಿ ಕಮಾಂಡರ್‌ಗಳಿರುವ ಕುರಿತು ಮಾಹಿತಿ ತಿಳಿದುಬಂದಿತ್ತು. ಮಾಹಿತಿ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ ಜೊತೆಗೆ ಪಲಾಮು ಮತ್ತು ಚತ್ರಾ ಜಿಲ್ಲೆಗಳ ಪೊಲೀಸ್ ಪಡೆಗಳುಕಾರ್ಯಾಚಣೆ ಆರಂಭಿಸಿತ್ತು. ಬೆಳಗ್ಗೆ ೯ ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭವಾಗಿತ್ತು. ಈ ವೇಳೆ ಭದ್ರತಾ ಪಡೆಗಳನ್ನು ಕಂಡ ಮಾವೋವಾದಿಗಳು ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಇದಕ್ಕೆ ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡಿ, ಐವರು ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ನಕ್ಸಲರಿಂದ ಇದೀಗ ಎಕೆ ೪೭, ಇನ್ಸಾಸ್ ರೈಫಲ್ಸ್ ವಶಪಡಿಸಿಕೊಳ್ಳಲಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಜಾನುವಾರು ವ್ಯಾಪಾರಿ ಸಾವು ಪ್ರಕರಣ-ಐವರ ವಿರುದ್ಧ ಪ್ರಕರಣ

ಬೆಂಗಳೂರು, ಏ. ೩: ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊAದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ. ಪರಾರಿಯಾಗಿರುವ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಡ್ಯ ನಿವಾಸಿ ಇದ್ರೀಸ್ ಪಾಷಾ (೩೯) ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲೇ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್ ಜಹೀರ್ ಅವರೊಂದಿಗೆ ಪಾಷಾ ಸುಮಾರು ೧೫ ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಶುಕ್ರವಾರ ರಾತ್ರಿ ೧೧.೪೫ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ ಕಾರಿನಲ್ಲಿ ಗ್ಯಾಂಗ್ ಸದಸ್ಯರು ಬಂದಾಗ, ಅಪಾಯದ ಮುನ್ಸೂಚನೆಯನ್ನು ಅರಿತ ಪಾಷಾ ಮತ್ತು ಇರ್ಫಾನ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಜಹೀರ್ ಸಿಕ್ಕಿಬಿದ್ದಿದ್ದು, ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುನೀತ್ ಕೆರೆಹಳ್ಳಿ ಅವರು ೨ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ - ಬಂದೂಕು ಠೇವಣಿಗೆ ವಿನಾಯಿತಿ

ಮಂಗಳೂರು, ಏ ೩: ಚುನಾವಣೆ ಸಮಯದಲ್ಲಿ ಪರವಾನಗಿಯುಳ್ಳ ಕೋವಿ ಠೇವಣಿ ಇಡುವ ವಿಚಾರವಾಗಿ ದಕ್ಷಿಣಕನ್ನಡ ಜಿಲ್ಲೆಯ ಷರತ್ತುಬದ್ಧ ವಿನಾಯಿತಿ ನೀಡಲಾಗಿದೆ. ಈ ಸಂಬAಧ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾಹಿತಿ ನೀಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲನ ಮುಂಜಾಗ್ರತ ಕ್ರಮವಾಗಿ ಶಸ್ತಾçಸ್ತç ಠೇವಣಿಗೆ ಆದೇಶಿಸಲಾಗುತ್ತದೆ. ಈ ಆದೇಶದಿಂದಾಗಿ ಬೆಳೆ ರಕ್ಷಣೆಗಾಗಿ ಕೋವಿಗಳನ್ನು ಹೊಂದಿರುವ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತಾçಸ್ತç ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ