ನಾಪೋಕ್ಲು, ಏ. ೩: ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಗಳು ಶುಕ್ರವಾರ ಜರುಗಿದವು. ಈ ಸಂದರ್ಭ ಅಧಿಕ ಸಂಖ್ಯೆಯ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದು, ತಮ್ಮ ಇಷ್ಟಾರ್ಥ ಸೇವೆ ಹರಕೆ ಸಮರ್ಪಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿದರು. ಅನಂತರ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಅರ್ಚಕ ರವಿ ಉಡುಪ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಶ್ರೀರಾಮ ಟ್ರಸ್ಟ್ನ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.