ಇಂದು ಸೂರತ್ ಕೋರ್ಟ್ಗೆ ರಾಹುಲ್ ಹಾಜರು
ನವದೆಹಲಿ, ಏ. ೨: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ತಾ. ೩ ರಂದು (ಇಂದು) ಸೂರತ್ ಕೋರ್ಟ್ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಾಷ್ಟç ರಾಜಧಾನಿಯ ಹೋಟೆಲ್ವೊಂದರಲ್ಲಿ ಸೋನಿಯಾ ಗಾಂಧಿ ಅವರನ್ನು ರಾಹುಲ್ ಭೇಟಿಯಾಗಿದ್ದು, ಸುಮಾರು ಒಂದೂವರೆ ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸೋದರ ಮಾವ ರಾಬರ್ಟ್ ವಾದ್ರಾ ಕೂಡ ಇದ್ದರು. ಪ್ರಧಾನಿ ಮೋದಿ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂದಿ ಗುಜರಾತ್ ಸೂರತ್ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ, ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ.
ಕಾರು ಸ್ಫೋಟ - ಪಾರಾದ ವೃದ್ಧ ದಂಪತಿ
ಶ್ರೀನಗರ, ಏ. ೨: ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೌಲೆವಾರ್ಡ್ ರಸ್ತೆಯಲ್ಲಿ ಎಏ೦೧ಒ ೦೮೭೮ ಸಂಖ್ಯೆಯ ಹೋಂಡಾ ಸಿಟಿ ವಾಹನದ ಹಿಂಬದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ಕ್ರಾಲ್ಸಂಗ್ರಿ ನಿಶಾತ್ ನಿವಾಸಿಗಳಾದ ಹಫೀಜುಲ್ಲಾ ಭಟ್ ಮತ್ತು ಅವರ ಪತ್ನಿ ಎಂದು ಗುರುತಿಸಲಾದ ದಂಪತಿ ಕಾರಿನಲ್ಲಿದ್ದರು. ಇಬ್ಬರೂ ಸುರಕ್ಷಿತವಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಕೆಲವು ಸಲಕರಣೆಗಳ ವೈಫಲ್ಯದಿಂದ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದAತೆ ತೋರುತ್ತಿದೆ. ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿ ಹೇಳಿದರು.
ಗೋಸಾಗಣೆಯ ವಾಹನದ ಮೇಲೆ ದಾಳಿ - ಓರ್ವನ ಹತ್ಯೆ
ಬೆಂಗಳೂರು, ಏ. ೨: ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬAಧ ವೀಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ. ವಾಹನದೊಳಗಡೆ ವ್ಯಕ್ತಿಯೋರ್ವ ಅಳುತ್ತಿರುವ ವೀಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊAಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ ಎಂದು ಟ್ವೀಟ್ ಮಾಡಿದೆ. ಮತ್ತೊಂದು ಟ್ವೀಟ್ನಲ್ಲಿ ಶೇ. ೪೦ ಕಮಿಷನ್ ಪಡೆದು ಆರಾಮಾಗಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದಿರೋ, ಕೊಲೆಗಡುಕರಿಗೆ ಕೊಟ್ಟಿದ್ದಿರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ಸರ್ಕಾರ ಹೊಣೆಯಲ್ಲವೇ? ಎಂದು ಪ್ರಶ್ನಿಸಿದ್ದು, ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬAತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ ಎಂದು ತಾಕೀತು ಮಾಡಿದೆ. ಪೊಲೀಸ್ ಮೂಲಗಳ ಪ್ರಕಾರ ನಿನ್ನೆ ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ೩೮ ವರ್ಷದ ದನದ ವ್ಯಾಪಾರಿ ಇದ್ರೀಸ್ ಪಾಷಾ ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುನೀತ್ ಕೆರೆಹಳ್ಳಿ ಮತ್ತು ಅವರ ಸಹವರ್ತಿಗಳು ಇದೇ ಸ್ಥಳದಲ್ಲಿ ಜಾನುವಾರುಗಳ ರಕ್ಷಣೆ ಮಾಡಿದ್ದರು.
ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿ ನಂ. ೧
ನವದೆಹಲಿ, ಏ. ೨: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು, ಈ ಅಂಕಿ- ಅಂಶಗಳನ್ನು ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿದೆ. ಜನಪ್ರಿಯತೆಯಲ್ಲಿ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರನ್ನೂ ಪ್ರಧಾನಿ ಮೋದಿ ಹಿಂದಿಕ್ಕಿದ್ದು, ಶೇ. ೭೬ ರಷ್ಟು ಮತಗಳನ್ನು ಪಡೆದಿದ್ದಾರೆ. ಆದರೆ ಫೆಬ್ರವರಿಗೆ ಹೋಲಿಕೆ ಮಾಡಿದರೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ ಸ್ವಲ್ಪ ಮಟ್ಟದ ಕುಸಿತ ಕಂಡುಬAದಿದ್ದು ಶೇ. ೭೮ ರಿಂದ ೭೬ಕ್ಕೆ ಇಳಿಕೆಯಾಗಿದೆ. ಪ್ರಧಾನಿ ಮೋದಿ ಅವರ ಜನಪ್ರಿಯತೆಯ ಹತ್ತಿರಕ್ಕೂ ಯಾವುದೇ ಜಾಗತಿಕ ಮಟ್ಟದ ನಾಯಕ ಬರಲು ಸಾಧ್ಯವಾಗಿಲ್ಲ ಎಂದು ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಪ್ರಧಾನಿ ಮೋದಿ ಸ್ಥಾನದಲ್ಲಿ ಮೆಕ್ಸೋದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇ. ೬೧ ರಷ್ಟು ಮತಗಳ ಮೂಲಕ ೨ನೇ ಸ್ಥಾನದಲ್ಲಿದ್ದರೆ, ಆಸ್ಟೆçÃಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಶೇ. ೫೫ ರಷ್ಟು ಮತಗಳೊಂದಿಗೆ ೩ನೇ ಸ್ಥಾನದಲ್ಲಿದ್ದಾರೆ.
ರೂ. ೧.೧ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಇಡಿ ಆದೇಶ
ಬೆಂಗಳೂರು, ಏ. ೨: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಟಿ.ಎನ್.ಚಿಕ್ಕರಾಯಪ್ಪ ಅವರ ೧.೧೦ ಕೋಟಿ ರೂಪಾಯಿ ಮೌಲ್ಯದ ಎರಡು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಆದೇಶ ಹೊರಡಿಸಿದೆ. ಚಿಕ್ಕರಾಯಪ್ಪ ಇತರ ಆರೋಪಿಗಳ ನೆರವಿನೊಂದಿಗೆ ಅಕ್ರಮವಾಗಿ ೫.೩೩ ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಕ್ರಮ ಹಣದಿಂದ ಪರಿಚಿತ ವ್ಯಕ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿ ಖರೀದಿಸಿ, ಅವುಗಳನ್ನು ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಚಿಕ್ಕರಾಯಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ (ಈಗ ಕರ್ನಾಟಕ ಲೋಕಾಯುಕ್ತ ಬೆಂಗಳೂರು) ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ. ಚಿಕ್ಕರಾಯಪ್ಪ ಮತ್ತು ಇತರ ಆರೋಪಿಗಳ ವಿರುದ್ಧ ಐಪಿಸಿ ಮತ್ತು ಪಿಸಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಎಸಿಬಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಕೂಡ ಸಲ್ಲಿಸಿತ್ತು.
ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಪ್ರಕರಣ ದಾಖಲು
ಲಖನೌ, ಏ. ೨: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿಯ ಯುವ ಘಟಕದ ನಾಯಕ ಅಕ್ಷಿತ್ ಅಗರ್ವಾಲ್ ನೀಡಿದ ದೂರಿನ ಆಧಾರದ ಮೇಲೆ ಸಂಭಾಲ್ ಕೊತ್ವಾಲಿಯಲ್ಲಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಹೇಳಿದ್ದಾರೆ. ಸಂಭಾಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಪ್ರಧಾನಿ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಜಿಲ್ಲಾ ಘಟಕದ ಕಚೇರಿ ಉಸ್ತುವಾರಿ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.