ಮಡಿಕೇರಿ, ಏ. ೨: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಮತದಾನ ಹಕ್ಕು ಪಡೆದ ವಿದ್ಯಾರ್ಥಿಗಳು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಡಿ. ಪ್ರಶಾಂತ್ ಅವರು ಮತದಾನದ ಮಹತ್ವ ಹಾಗೂ ಮತದಾನದ ಪ್ರಕ್ರಿಯೆಯನ್ನು ಕಾರ್ಯಕ್ರಮದಲ್ಲಿ ವಿವರಿಸಿದರು. ಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ ಅವರು ಮತದಾನದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು. ವಿದ್ಯಾಸಂಸ್ಥೆಯ ಪದವಿ ವಿಭಾಗ ಪ್ರಾಂಶುಪಾಲೆ ಡಾ. ರೇಖಾ ಚಿನ್ನಪ್ಪ ಹಾಗೂ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ದೇವಕಿ ಅವರು ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮತದಾನದ ಮಹತ್ವವನ್ನು ಅರಿತುಕೊಂಡರು.